ತಿರುವನಂತಪುರ :
ಭಾರತೀಯ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಇಂದು ಮತ್ತೆ ಆಕರ್ಷಕ ಬ್ಯಾಟಿಂಗ್ ನಡೆಸಿದ್ದಾರೆ.
ಶ್ರೀಲಂಕಾ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಅವರು ಶತಕ ಬಾರಿಸಿದ್ದಾರೆ. ಶುಭಮನ್ ಗಿಲ್ ಅವರು ಸಹ ಶತಕ ಸಿಡಿಸಿದ್ದು 116 ಬಾರಿಸಿದ್ದಾರೆ. ಮೊದಲು ಬ್ಯಾಟಿಂಗ್ ನಡೆಸಿದ ಭಾರತಗಳಲ್ಲಿ ಐದು ವಿಕೆಟ್ ಕಳೆದುಕೊಂಡು 390 ರನ್ ಗಳಿಸಿದೆ.
ವಿರಾಟ್ ಕೊಹ್ಲಿ ಏಕದಿನದಲ್ಲಿ 46ನೇ ಶತಕ ಬಾರಿಸಿದ್ದು ಇನ್ನು ಮೂರು ಶತಕ ಸಿಡಿಸಿದರೆ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿಯಲಿದ್ದಾರೆ.
ಮಾಜಿ ನಾಯಕ ವಿರಾಟ್ ಕೊಹ್ಲಿ ತವರಿನಲ್ಲಿ ಅತಿ ಹೆಚ್ಚು ಏಕದಿನ ಶತಕ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ.
ಶ್ರೀಲಂಕಾ ವಿರುದ್ಧ ತಿರುವನಂತಪುರದಲ್ಲಿ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ 34 ವರ್ಷದ ವಿರಾಟ್ ಕೊಹ್ಲಿ ಅವರು ಭಾನುವಾರ 166 (110) ರನ್ ಸಿಡಿಸಿದರು. ಭಾರತದಲ್ಲಿ ವಿರಾಟ್ ಕೊಹ್ಲಿ ಅವರ 21ನೇ ಏಕದಿನ ಶತಕವಿದು. ಈ ಮೂಲಕ ಅವರು ತವರಿನಲ್ಲಿ 20 ಏಕದಿನ ಶತಕ ಗಳಿಸಿರುವ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದಿದ್ದಾರೆ.
ಇಂದು ದಾಖಲಾದ ಶತಕದೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ಅವರ ಒಟ್ಟು ಶತಕಗಳ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ಸಚಿನ್ ತೆಂಡೂಲ್ಕರ್ ಅವರು 49 ಶತಕಗಳನ್ನು ಸಿಡಿಸಿದ್ದಾರೆ.
ದಕ್ಷಿಣ ಆಫ್ರಿಕಾದ ಕ್ರಿಕೆಟರ್ ಹಾಶೀಮ್ ಆಮ್ಲಾ ಅವರು ತವರು ನೆಲದಲ್ಲಿ 14 ಏಕದಿನ ಶತಕ ಗಳಿಸಿದ್ದಾರೆ.