This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ರಾಜಕೀಯ ನಿವೃತ್ತಿ ಸುಳಿವು ನೀಡಿದ ಕೃಷ್ಣ Krishna hinted at political retirement


 

ಬೆಂಗಳೂರು :
ನಾಡಿನ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವ ಸುಳಿವು ದೊರೆತಿದೆ.

ಕರ್ನಾಟಕದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ರಾಜಕೀಯವಾಗಿ ಉತ್ತುಂಗದ ಸೇವೆ ಸಲ್ಲಿಸಿದ್ದ ಎಸ್.ಎಂ. ಕೃಷ್ಣ ಅವರ ರಾಜಕೀಯ ಸೇವೆ ಮೌಲಿಕವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘಕಾಲ ರಾಜಕಾರಣ ಮಾಡಿದ್ದ ಅವರು ಕೆಲ ವರ್ಷಗಳ ಹಿಂದೆ ನರೇಂದ್ರ ಮೋದಿಯವರ ಪ್ರಭಾವಕ್ಕೆ ಒಳಗಾಗಿ ತಮ್ಮ ಇಳಿ ವಯಸ್ಸಿನಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು.

90 ವರ್ಷದ ವಯಸ್ಸಿನಲ್ಲಿ 50 ವರ್ಷದ ವ್ಯಕ್ತಿ ಹಾಗೆ ನಟಿಸೋಕೆ ಆಗುತ್ತಾ ? ಆದ್ದರಿಂದ ರಾಜಕೀಯ ಜೀವನಕ್ಕೆ ಗುಡ್ ಬೈ ಹೇಳುವ ಬಗ್ಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ವಯಸ್ಸಿನ ಕಾರಣದಿಂದ ಸಾರ್ವಜನಿಕ ಜೀವನದಿಂದ ದೂರ ಇದ್ದೇನೆ. ಹಾಗಾಗಿ ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆ ಇಲ್ಲ ಎಂದು ಅವರು ಹೇಳಿದ್ದಾರೆ.

ಎಸ್.ಎಂ ಕೃಷ್ಣ 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯು ಸಹ ಕಾರ್ಯ ನಿರ್ವಹಿಸಿದ್ದಾರೆ. ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ 2017 ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪಡೆದರು. ಅವರು 1999 ರಿಂದ 2004 ರವರೆಗೆ ಕರ್ನಾಟಕದ 16 ನೇ ಮುಖ್ಯಮಂತ್ರಿಯಾಗಿದ್ದರು ಮತ್ತು 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19 ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ 1989 ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.


Jana Jeevala
the authorJana Jeevala

Leave a Reply