ಖಾನಾಪುರ: ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಖಾನಾಪುರ ಮಂಡಲ ಕಚೇರಿಯಲ್ಲಿ ಸೋಮವಾರ ಬಿಜೆಪಿ ಸಭೆಯನ್ನು ಆಯೋಜಿಸಲಾಗಿತ್ತು.
ಈ ಸಭೆಯಲ್ಲಿ ಬಿಎಲ್ ಎ 2 ಮತ್ತು ವಿಬಿ ಜಿ ರಾಮ್ ಜಿ ಯೋಜನೆಗಳ ಕುರಿತು ಚರ್ಚಿಸಲಾಯಿತು ಮತ್ತು ಕರ್ನಾಟಕ ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಆಯ್ಕೆಯಾದ ಬೆಳಗಾವಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಮೋದ ಸೂರ್ಯಕಾಂತ ಕೊಚೇರಿ ಅವರನ್ನು ಪಕ್ಷದ ಪರವಾಗಿ ಸನ್ಮಾನಿಸಲಾಯಿತು. ಶಾಸಕ ವಿಠ್ಠಲ ಹಲಗೇಕರ, ತಾಲೂಕು ಬಿಜೆಪಿ ಅಧ್ಯಕ್ಷ ಬಸವರಾಜ ಸಾಣಿಕೊಪ್ಪ, ಮಾಜಿ ಅಧ್ಯಕ್ಷ ಸಂಜಯ ಕುಬಾಲ, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಬಾಬುರಾವ್ ದೇಸಾಯಿ, ಪ್ರಧಾನ ಕಾರ್ಯದರ್ಶಿ ಗುಂಡು ತೋಪಿನಕಟ್ಟಿ, ಪಂಡಿತ ಓಗ್ಲೆ, ಮೋಹನ ಪಾಟೀಲ, ಕಿಶೋರ ಹೆಬ್ಬಾಳಕರ, ಬಾಬು ದೇಸಾಯಿ, ಶಿವ ಮಾಯೇಕರ, ಮಹಿಳಾ ಮೋರ್ಚಾ ಅಧ್ಯಕ್ಷೆ ರಜಕ್ತಾ ಪಾಟೀಲ, ಪ್ರಮೋದ ಪಾಟೀಲ, ಡಿ. ಗೋಂಧಳಿ, ನಾರಾಯಣ ಗುರವ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.


