- ಉಡುಪಿ: ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ ಸಾವನ್ನಪ್ಪಿದ ಘಟನೆ ರವಿವಾರ ನಡೆದಿದೆ. ಹೃದಯಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಚಿಕ್ಕಮಗಳೂರು ಮೂಲದ 58 ರ ಹರೆಯದ ನಾಸೀರ್ ಅವರು 2010 ಬ್ಯಾಚ್ ನ ಪೊಲೀಸ್ ಅಧಿಕಾರಿಯಾಗಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ “ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ” ಘೋಷ ವಾಕ್ಯದೊಂದಿಗೆ ಪೊಲೀಸ್ ಇಲಾಖೆ ಆಯೋಜಿಸಿದ್ದ ಮ್ಯಾರಥಾನ್ ನಲ್ಲಿ ಭಾಗಿಯಾಗಿದ್ದ ವೇಳೆ ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಕುಸಿದು ಬಿದ್ದಿದ್ದಾರೆ. ಪಕ್ಕದಲ್ಲೇ ಇದ್ದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅಲ್ಲಿನ ವೈದ್ಯರು ಸಾವನ್ನಪ್ಪಿರುವುದನ್ನು ದೃಢಪಡಿಸಿದ್ದಾರೆ.
ಜನಪ್ರಿಯ ವ್ಯಕ್ತಿಯಾಗಿ ಸೇವೆ : ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ ಸಾವು


