ಅಥಣಿ :
ಕಾಂಗ್ರೆಸ್ ಪಕ್ಷದ ಮಾಜಿ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಗೆ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಎಂದಿನಂತೆ ಟೀಕಾಸ್ತ್ರ ಪ್ರಯೋಗ ಮಾಡಿದ್ದಾರೆ.
ಅಥಣಿ ತಾಲೂಕಿನ ಹನಮಾಪುರ ಗ್ರಾಮದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರಿಗೆ ಬ್ಯಾಡ್ ಕೊಲೆಸ್ಟ್ರಾಲ್ ಹೆಚ್ಚಾಗಿದೆ. ಅದನ್ನು ಕಡಿಮೆ ಮಾಡಿಕೊಳ್ಳಲು ಭಾರತ್ ಜೋಡೋ ಯಾತ್ರೆ ಹಮ್ಮಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಮುಂದೆ ಭವಿಷ್ಯ ಇಲ್ಲ ಎಂದು ಅವರು ಹೇಳಿದರು.