ಬೆಳಗಾವಿ :
ಆಗಸ್ಟ್ 11 ರಂದು ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು, ಶಾಸಕರು ಅಥಣಿಗೆ ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅಥಣಿ ಮತ ಕ್ಷೇತ್ರದ ನಾಗರಿಕರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮಾಜಿ ಡಿಸಿಎಂ ಮತ್ತು ಅಥಣಿ ಶಾಸಕ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ.
ಕೊಕಟನೂರ ಗ್ರಾಮದ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಕಾಂಗ್ರೆಸ್ ಸಭೆ ಉದ್ದೇಶಿಸಿ ಮಾತನಾಡಿದರು. ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗಬೇಕಾಗಿದ್ದ ಪಶು ವೈದ್ಯಕೀಯ ಮಹಾವಿದ್ಯಾಲಯ ಅಥಣಿ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಸ್ಥಾಪನೆ ಮಾಡಿರುವುದು ತಾಲೂಕಿನ ಹೆಮ್ಮೆ. ಕೊಕಟನೂರು ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಮಹಾವಿದ್ಯಾಲಯದ ಉದ್ಘಾಟನೆಗೆ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ನೂತನ ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ವಾಹನ ಚಾಲನೆ ತರಬೇತಿ ಕಚೇರಿ ಉದ್ಘಾಟನೆ, ಅಥಣಿಯಲ್ಲಿ ಬಸವೇಶ್ವರ ಕಂಚಿನ ಮೂರ್ತಿ ಅನಾವರಣ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸಚಿವರ ದಂಡೇ ಆಗಮಿಸಲಿದೆ ಎಂದು ಅವರು ತಿಳಿಸಿದರು.