This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಸರಕಾರದ ಸೌಲಭ್ಯಗಳನ್ನು ಪಡೆಯುವುದು ಜನರ ಹಕ್ಕು – ಲಕ್ಷ್ಮೀ ಹೆಬ್ಬಾಳಕರ್ Access to government facilities is the right of the people - Lakshmi Hebbalkar


 

ಬೆಳಗಾವಿ:

ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಪಡೆಯುವುದು ಜನರ ಹಕ್ಕಾಗಿದ್ದು, ಅವುಗಳನ್ನು ಒದಗಿಸುವುದು ಜನಪ್ರತಿನಿಧಿಗಳ ಕರ್ತವ್ಯವಾಗಿದೆ. ಕಳೆದ ಹಲವು ವರ್ಷಗಳಿಂದ ತಮ್ಮ ಹಕ್ಕಿನ ಸೌಲಭ್ಯಗಳನ್ನು ಪಡೆಯಲು ವಂಚಿತರಾಗಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರಿಗೆ ಅವರಿಗೆ ಸಲ್ಲಬೇಕಾದ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತಿದ್ದೇನೆ ಎಂದು ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮ ಪಂಚಾಯತ ಕಾರ್ಯಾಲಯ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಜನರು ತಮ್ಮ ಪ್ರತಿನಿಧಿಯಾಗಿ ಶಾಸಕರನ್ನು ಆಯ್ಕೆ ಮಾಡಿ ಕಳಿಸುತ್ತಾರೆ. ಹಾಗಾಗಿ ಜನರ ಸೇವೆ ಮಾಡುವುದು, ಅವರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸುವುದು ಶಾಸಕರ ಕರ್ತವ್ಯ. ಕಳೆದ ನಾಲ್ಕೂವರೆ ವರ್ಷಗಳಿಂದಲೂ ನನ್ನ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತಿದ್ದೇನೆ. ಇದಕ್ಕೆ ಜನರ ಪ್ರೀತಿ, ವಿಶ್ವಾಸ ಮತ್ತು ಸಹಕಾರ ಕಾರಣ ಎಂದು ಹೆಬ್ಬಾಳಕರ್ ಹೇಳಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಡಾಲ ಅಂಕಲಗಿಯ ವೇದ ಮೂರ್ತಿ ಶ್ರೀ ರಾಚಯ್ಯ ಅಜ್ಜನವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹಿರೇಮಠ, ಉಪಾಧ್ಯಕ್ಷ ಬಸವಂತ ನಾಯಿಕ, ಪಿಡಿಒ ಪಾರ್ವತಿ ಮಾ ಜಾಧವ್, ಡಿ. ಎಂ. ಬನ್ನೂರ, ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.


Jana Jeevala
the authorJana Jeevala

Leave a Reply