ಬೆಳಗಾವಿ :
ನಾಡಿನ ಸಾಂಸ್ಕೃತಿಕ ರಾಜಧಾನಿ ಎಂದು ಖ್ಯಾತಿ ಪಡೆದಿರುವ ಮೈಸೂರಿನಲ್ಲಿ ಇಂದು ನಡೆದ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಮತ ಕ್ಷೇತ್ರದ ಅದಿ ದೇವತೆಗಳನ್ನು ಮಾತ್ರ ಮರೆಯಲಿಲ್ಲ!
ಮೈಸೂರಿನ ಚಾಮುಂಡೇಶ್ವರಿ ದೇವಿ ನಾಡಿನಲ್ಲಿ ಪ್ರಸಿದ್ದಿ ಪಡೆದಿದೆ. ಅಂತಹ ಜಗತ್ಪ್ರಸಿದ್ಧ ದೇವಿ ನೆಲೆಯಾಗಿರುವ ನಗರವಾಗಿರುವ ಮೈಸೂರಿನಲ್ಲಿ ಇಂದು ನಡೆದ ಗೃಹಲಕ್ಷ್ಮೀ ಯೋಜನೆಯ ಕಾರ್ಯಕ್ರಮದಲ್ಲಿ ಅವರು ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಪ್ರಸಿದ್ಧ ದೇವರನ್ನು ತಮ್ಮ ಭಾಷಣದಲ್ಲಿ ಸ್ಮರಿಸಿದರು.
ಸುಳೇಭಾವಿ ಮಹಾಲಕ್ಷ್ಮೀ ದೇವಿ ಹಾಗೂ ಉಚಗಾವಿಯ ಮಳೆಕರಣಿ ದೇವಿಗೆ ನನ್ನ ಸಾಷ್ಟಾಂಗ ನಮಸ್ಕಾರಗಳು ಎಂದು ಭಾಷಣ ಆರಂಭಿಸಿ ಎಲ್ಲರ ಮನೆಗೆದ್ದರು.
ಸಹೋದರನಿಗೆ ರಾಖಿ :
ಇಂದು ಪಂಚ ಗ್ಯಾರೆಂಟಿಯಲ್ಲಿನ ಪ್ರಮುಖ ಯೋಜನೆಯಾದ ‘ಗೃಹಲಕ್ಷ್ಮಿ ಯೋಜನೆ’ಯ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಗಿದೆ.
ಮೈಸೂರಿನಲ್ಲಿ ನಡೆದ ಈ ಕಾರ್ಯಕ್ರಮದ ಬ್ಯುಸಿಯಲ್ಲೂ ಸಚಿವೆ ಲಕ್ಷ್ಮಿ ಹೆಬ್ಬಾಳ್ವರ್ ವೇದಿಕೆಯ ಹಿಂಭಾಗದ ವಿಶ್ರಾಂತಿ ಕೊಠಡಿಯಲ್ಲಿ ರಕ್ಷಾ ಬಂಧನ ಆಚರಿಸಿದ್ದಾರೆ.
ಸಹೋದರ, ವಿಧಾನ ಪರಿಷತ್ತಿನ ಸದಸ್ಯರೂ ಆಗಿರುವ ಚನ್ನರಾಜ ಹಟ್ಟಿಹೊಳಿಗೆ ರಾಖಿ ಕಟ್ಟಿ, ಸಿಹಿ ತಿನ್ನಿಸಿ ಹಬ್ಬವನ್ನು ಆಚರಿಸಿದ್ದಾರೆ.
ಈ ಸಂದರ್ಭದಲ್ಲಿ ಅಲ್ಲಿರುವ ಅಧಿಕಾರಿಗಳಿಗೆ ರಾಖಿ ಕಟ್ಟಿದ್ದಾರೆ.