ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಂಘಟನಾತ್ಮಕ ಸಭೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಗೃಹ ಕಚೇರಿಯಲ್ಲಿ ಮಂಗಳವಾರ ನಡೆಯಿತು.
ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತಿತರ ಪ್ರಮುಖರ ಉಪಸ್ಥಿತಿಯಲ್ಲಿ ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸುದೀರ್ಘವಾಗಿ ಚರ್ಚೆ ನಡೆಯಿತು.
ಕ್ಷೇತ್ರದಲ್ಲಿ ಸಂಘಟನೆ ಅತ್ಯಂತ ಬಲಿಷ್ಠವಾಗಿದ್ದು, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಕ್ರಿಯಾಶೀಲರಾಗಬೇಕು. ಪ್ರತಿ ಮನೆ ಮನೆಗೆ ಭೇಟಿ ನೀಡಿ ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾಹಿತಿ ನೀಡಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಚನ್ನರಾಜ ಹಟ್ಟಿಹೊಳಿ ಕರೆ ನೀಡಿದರು.
ಈ ವೇಳೆ ಮಾತನಾಡಿದ ನಾಯಕರು ಹಾಗೂ ಕಾರ್ಯಕರ್ತರು, ಕಳೆದ ನಾಲ್ಕೂವರೆ ವರ್ಷದಲ್ಲಿ ಕ್ಷೇತ್ರ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಂಡಿರುವುದರಿಂದ ಕ್ಷೇತ್ರದ ಜನರು ಖುಷಿಯಿಂದಿಂದ್ದಾರೆ. ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನೇ ಆಯ್ಕೆ ಮಾಡಬೇಕೆಂದು ತೀರ್ಮಾನಿಸಿದ್ದಾರೆ. ಹಾಗಾಗಿ ಕಳೆದ ಬಾರಿಗಿಂತ ಹೆಚ್ಚಿನ ಬಹುಮತದಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಜಯಗಳಿಸುವುದು ನಿಶ್ಚಿತ ಎಂದು ಅಭಿಪ್ರಾಯಪಟ್ಟರು.
ಈ ಸಮಯದಲ್ಲಿ ಬ್ಲಾಕ್ ಅಧ್ಯಕ್ಷ ಸಿ ಸಿ ಪಾಟೀಲ, ಹಿರೇಬಾಗೇವಾಡಿಯ ದರ್ಗಾ ಅಜ್ಜನವರು, ಅಡಿವೇಶ ಇಟಗಿ, ಮಹಾವೀರ ಪಾಟೀಲ, ಬಸವರಾಜ ಮ್ಯಾಗೋಟಿ, ಮನೋಹರ ಬಾಂಡ್ಗೆ, ಪಾರಿಸ್ ಪಾರಿಶ್ವಾಡ್, ನಿಂಗಪ್ಪ ತಳವಾರ, ಫಕೀರಗೌಡ ಪಾಟೀಲ, ನಾಗೇಶ ದೇಸಾಯಿ, ಗೌಸ್ ಜಾಲಿಕೊಪ್ಪ, ಬಿ ಜಿ ವಾಲಿ ಇಟಗಿ, ಪ್ರಕಾಶ ಪಾಟೀಲ, ಬಸವರಾಜ ತಳವಾರ ಮುಂತಾದವರು ಉಪಸ್ಥಿತರಿದ್ದರು.