ಬೆಳಗಾವಿ : ಸುಳೇಭಾವಿಯಲ್ಲಿ ಮಹಿಳೆಯರಿಬ್ಬರು ವಿದ್ಯುತ್ ಪ್ರವಹಿಸಿ ಮೃತಪಟ್ಟ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಸಂಜೆ ಮೃತ ಮಹಿಳೆಯರ ಮನೆಗಳಿಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಧೈರ್ಯ ತುಂಬಿ, ಸಾಂತ್ವನ ಹೇಳಿದರು. ಜೊತೆಗೆ ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಆರ್ಥಿಕ ಸಹಾಯ ಮಾಡಿದರು.
ಸುಳೇಭಾವಿ ಮೃತ ಮಹಿಳೆಯರ ಮನೆಗೆ ತೆರಳಿ ಸಾಂತ್ವನ ಹೇಳಿ ಆರ್ಥಿಕ ಸಹಾಯ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
