ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳಕರ್ ಅವರ ಕಾರು ಚಾಲಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಪೊಲೀಸರು ಕಾರ್ಯಪ್ರವೃತ್ತರಾಗಿ ಬುಧವಾರದಂದು ನಾಲ್ವರನ್ನು ಬಂಧಿಸಿದ್ದಾರೆ.
ಶಿವಯ್ಯ ಪೂಜಾರಿ, ಮಿತೇಶ್ ಬಡಿಗೇರ, ಮೋನಪ್ಪ ಪಾಟೀಲ, ಸಂಪತ್ ಕಡೋಲ್ಕರ್ ಬಂಧಿತರು. ಬಸವಂತ ಅವರ ಸ್ನೇಹಿತ ಮದನ್ ಕ್ಯಾಂಪ್ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


