ಬೆಳಗಾವಿ :
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಂಗಣದಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದ 18 ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಜೂ.28 ರಂದು ಹಮ್ಮಿಕೊಳ್ಳಲಾಗಿದೆ. ಸಂಸದ ಡಾ. ಎಲ್. ಹನುಮಂತಯ್ಯ ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ. ಪುಸ್ತಕಗಳ ಕುರಿತು ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯ ಪ್ರೊ. ಬಸವರಾಜ ಕಲ್ಗುಡಿ ಮಾತನಾಡಲಿದ್ದಾರೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಾಮಚಂದ್ರಗೌಡ ಅಧ್ಯಕ್ಷತೆ ವಹಿಸುವರು.
ಕುಲಸಚಿವೆ ರಾಜಶ್ರೀ ಜೈನಾಪುರ, ಮೌಲ್ಯಮಾಪನ ಕುಲಸಚಿವ ಪ್ರೊ. ಶಿವಾನಂದ ಗೊರನಾಳೆ, ವಿತ್ತಾಧಿಕಾರಿ ಪ್ರೊ. ಎಸ್. ಬಿ. ಆಕಾಶ್, ರಾಣಿ ಚನ್ನಮ್ಮ ಅಧ್ಯಯನ ಪೀಠದ ಅಧ್ಯಕ್ಷ ಪ್ರೊ. ಎಸ್. ಎಂ. ಗಂಗಾಧರಯ್ಯ, ಪ್ರಸಾರಾಂಗದ ಸಹಾಯಕ ನಿರ್ದೇಶಕ ಡಾ. ಪಿ. ನಾಗರಾಜ್, ರಾಣಿ ಚನ್ನಮ್ಮ ಅಧ್ಯಯನ ಪೀಠದ ಸಂಯೋಜಕ ಡಾ. ಮಹೇಶ ಗಾಜಪ್ಪನವರ್ ಉಪಸ್ಥಿತರಿರುವರು ಎಂದು ರಾಣಿ ಚನ್ನಮ್ಮ ಅಧ್ಯಯನ ಪೀಠದ ಅಧ್ಯಕ್ಷ ಪ್ರೊ. ಎಸ್. ಎಂ. ಗಂಗಾಧರಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.