ಬೆಳಗಾವಿ : ಖಾನಾಪುರ ತಾಲೂಕಿನ ಖೈರವಾಡ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನ ನಿರ್ಮಾಣಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಈ ಕಾರ್ಯಕ್ರಮದಲ್ಲಿ ಶಾಸಕ ವಿಠ್ಠಲ ಎಸ್. ಹಲಗೇಕರ ಅವರು ಭಾಗವಹಿಸಿ ಪೂಜೆ ನೆರವೇರಿಸಿದ್ದಾರೆ.
ಶಾಸಕರು ಮಂದಿರ ನಿರ್ಮಾಣಕ್ಕೆ ತಮ್ಮ ಅನುದಾನದಿಂದ 10 ಲಕ್ಷ ರೂಪಾಯಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಮೋದ ಕೋಚೇರಿ, ಬಿಜೆಪಿ ಮಾಜಿ ಮಂಡಲ ಅಧ್ಯಕ್ಷ ಸಂಜಯ್ ಕುಬಲ, ರುಕ್ಕಮಣ್ಣ ಜೋಜವಾಡಕ್ಕರ, ಬರಮಣಿ ಪಾಟೀಲ ಹಾಗೂ ಗ್ರಾಮದ ಹಿರಿಯರು, ಪಂಚಾಯಿತಿ ಸದಸ್ಯರು ಮತ್ತು ಯುವಕರು ಉಪಸ್ಥಿತರಿದ್ದರು.