ಬೆಳಗಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರೂ.) ಖಾನಾಪುರ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಪಾರಿಶ್ವಾಡ ಖಾನಾಪುರ ಇವರ ಆಶ್ರಯದಲ್ಲಿ 1961ನೇ ಮದ್ಯವರ್ಜನ ಶಿಬಿರವನ್ನು ಶರಣೆ ಮಲ್ಲಮ್ಮಾ ದಾನಮ್ಮ ದೇವಿ ಮಂಗಲ ಕಾರ್ಯಾಲಯ, ಪಾರಿಶ್ವಾಡದಲ್ಲಿ ಆಯೋಜಿಸಲಾಗಿತ್ತು.
ವಿವಿಧ ಸಂಘ-ಸಂಸ್ಥೆಗಳು ಮತ್ತು ದಾನಿಗಳು
ಪರಮ ಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ|| ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಹಾಗೂ ಸಂಶೋಧನ ಕೇಂದ್ರ, ಲಾಯಿಲ, ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಈ ಶಿಬಿರವನ್ನು ನಡೆಸಲಾಯಿತು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾಗೂ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಯುವಕರು, ತಾಯಂದಿರು ಮತ್ತು ಧರ್ಮಸ್ಥಳ ಸಂಘದ ಎಲ್ಲಾ ಪದಾಧಿಕಾರಿಗಳು, ಉಪಸ್ಥಿತರಿದ್ದರು.