ಬೆಂಗಳೂರು : ವಿಜಯಶಂಕರ್ ಅವರು ಮೇಘಾಲಯ ರಾಜ್ಯಪಾಲರಾಗಿ ನೇಮಕವಾಗುವ ಮೂಲಕ ಅವಿಭಜಿತ ಮೈಸೂರು ಜಿಲ್ಲೆಯಿಂದ ಬಿ.ರಾಚಯ್ಯ ಅವರ ನಂತರ ರಾಜ್ಯಪಾಲರಾದ ಎರಡನೇಯವರು ಎನ್ನಿಸಿದ್ದಾರೆ. ಸ್ವಾತಂತ್ರ್ಯ ಬಳಿಕ ಮೈಸೂರಿನ ಕೊನೆಯ ಮಹಾರಾಜ ಜಯಚಾಮರಾಜ ಒಡೆಯರ್ ಅವರು ಕರ್ನಾಟಕ ಹಾಗೂ ತಮಿಳುನಾಡಿನ ರಾಜ್ಯಪಾಲರಾಗಿದ್ದರು. ನಂತರ ಬಿ.ರಾಚಯ್ಯ ಹಿಮಾಚಲ ಪ್ರದೇಶ ಹಾಗೂ ಕೇರಳದ ರಾಜ್ಯಪಾಲ ಹುದ್ದೆ ಅಲಂಕರಿಸಿದ್ದರು. ಎಸ್.ಎಂ. ಕೃಷ್ಣ ಅವರು ಮಹಾರಾಷ್ಟ್ರ, ಮಾರ್ಗರೇಟ್ ಆಳ್ವಾ ಅವರು ಉತ್ತರಾಖಂಡ್, ನ್ಯಾಯಮೂರ್ತಿ ಎಂ.ರಾಮಾ ಜೋಯಿಸ್ ಅವರು ಬಿಹಾರ ಹಾಗೂ ಜಾರ್ಖಂಡ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.
ರಾಜ್ಯಪಾಲರ ಹುದ್ದೆ ಅಲಂಕರಿಸಿದ ಕರ್ನಾಟಕದ ನಾಯಕರು
