ಬೆಳಗಾವಿ :
ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ಮಾರ್ಚ್ 20ರಂದು ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸಿಂಗ್ ಸುರ್ಜೇವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಮತ್ತು ರಾಜ್ಯ ಕಾಂಗ್ರೆಸ್ ನಾಯಕರ ಜೊತೆಗೆ ರಾಹುಲ್ ಗಾಂಧಿಯವರು ಭೇಟಿ ನೀಡುವ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾದ ಬೃಹತ್ ಯುವ ಸಮಾವೇಶ ನಡೆಯುವ ಸ್ಥಳ ಸಿಪಿಎಡ್ ಮೈದಾನಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು
ಈ ಸಂದರ್ಭದಲ್ಲಿ ಶಾಸಕರು, ಮಾಜಿ ಶಾಸಕರು ಸೇರಿ ಪಕ್ಷದ ಪ್ರಮುಖ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

 
             
         
         
        
 
  
        
 
    