This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಮಾಜಿ ಸೈನಿಕರಿಗೆ ಸರ್ಕಾರದಿಂದ ಸೂಕ್ತ ಸ್ಥಾನಮಾನ ಸಿಗಲಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ -ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕದ ಉದ್ಘಾಟನೆ ಸಮಾರಂಭ Ex-servicemen should get appropriate status from the government: KPCC working president Satish Jarakiholi - Inauguration ceremony of All Karnataka Ex-Servicemen's Association district unit


 

ಬೆಳಗಾವಿ:

ದೇಶ ಕಾಯುವ ಕಾಯಕವನ್ನು ಅತ್ಯಂತ ಪ್ರಾಮಾಣಿಕತೆಯಿಂದ ನಿರ್ವಹಿಸಿ ನಿವೃತ್ತಿ ಜೀವನ ನಡೆಸುತ್ತಿರುವ ಮಾಜಿ ಸೈನಿಕರಿಗೆ ಸರ್ಕಾರದಿಂದ ಸೂಕ್ತ ಸ್ಥಾನ ಮಾನ ಸಿಗುವಂತಾಗಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಉದ್ಘಾಟಿಸಿ ಅವರು ಮಾತನಾಡಿ, ಈ ಸಂಘಟನೆಯ ಮುಖಾಂತರ ನಿವೃತ್ತ ಸೈನಿಕರ ಹಿತಕಾಯುವ ಕೆಲಸವಾಗಬೇಕು. ದೇಶದಲ್ಲಿ ಮಾಜಿ ಸೈನಿಕರು ಕೇವಲ ಗಣರಾಜ್ಯೋತ್ಸವ, ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಸೀಮಿತವಾಗದೆ ಸಮಾಜದಲ್ಲಿ ಗೌರವಯುತ ಸ್ಥಾನ ಪಡೆಯುವಂತಾಗಬೇಕು ಎಂದು ಹೇಳಿದರು.

ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಜೀವನದಲ್ಲಿ ಅತ್ಯಂತ ಪವಿತ್ರವಾದ ದೇಶ ಕಾಯುವ ಕೆಲಸ ಮಾಡಿರುವ ಸೈನಿಕರು ಈಗ ನಿವೃತ್ತ ಜೀವನ ನಡೆಸುತ್ತಿದ್ದೀರಿ. ನಿಮ್ಮ ಸೇವೆಯನ್ನು ಸಮಾಜ ಮರೆಯಲು ಸಾಧ್ಯವಿಲ್ಲ. ನೀವು ಸದಾ ಎಚ್ಚರರಾಗಿದ್ದು ದೇಶದ ಜನರು ನೆಮ್ಮದಿಯಿಂದ ಬದುಕುವಂತೆ ಮಾಡಿದ್ದೀರಿ. ಈಗ ನಿಮಗೆ ಸರಕಾರದಿಂದ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಕೊಡಿಸುವ ಮೂಲಕ ನೆಮ್ಮದಿಯನ್ನು ಕೊಡಿಸುವಲ್ಲಿ ಎಲ್ಲ ರೀತಿಯಿಂದ ಪ್ರಯತ್ನಿಸುತ್ತೇನೆ ಎಂದರು.

ಸಂಘದ ಜಿಲ್ಲಾಧ್ಯಕ್ಷ ಬಸಪ್ಪ ತಳವಾರ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಚನ್ನರಾಜ ಹಟ್ಟಿಹೊಳಿ, ಸಂಘದ ರಾಜ್ಯಾಧ್ಯಕ್ಷ ಡಾ. ಶಿವಣ್ಣ ಎನ್‌.ಕೆ, ಗೌರವ ಅಧ್ಯಕ್ಷ ನಾಗಪ್ಪ ಕಳಸನ್ನವರ, ಉಪಾಧ್ಯಕ್ಷ ವಿರೂಪಾಕ್ಷ ತಿಳಗಂಜಿ, ದಯಾನಂದ ಢಾಳಿ, ರಮೇಶ ಚೌಗುಲಾ, ಪ್ರಧಾನ ಕಾರ್ಯದರ್ಶಿ ಜಗದೀಶ ಪೂಜೇರಿ, ಕಾರ್ಯದರ್ಶಿ ಶಿವಬಸಪ್ಪ ಕಾಡನ್ನವರ ಸೇರಿದಂತೆ ಮಾಜಿ ಸೈನಿಕರು ಇದ್ದರು.


Jana Jeevala
the authorJana Jeevala

Leave a Reply