ಬೆಂಗಳೂರು :
ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕರೋನಾ ಹಗರಣದ ಬಗ್ಗೆ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಿಜೆಪಿ ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಹಗರಣದ ಬಗ್ಗೆ ಮಾಡಿರುವ ಪ್ರಸ್ತಾಪದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಈ ರೀತಿ ತಿಳಿಸಿದರು.
ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು :
ಕನ್ನಡಪರ ಸಂಘಟೆಗಳ ಕನ್ನಡ ನಾಮಫಲಕ ಹಾಕಬೇಕೆನ್ನುವ ಬಗ್ಗೆ ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ನ್ಯಾಯದ ಪರ ಧ್ವನಿ ಎತ್ತುವ ಯಾವುದೇ ಹೋರಾಟಕ್ಕೂ ಸರ್ಕಾರದ ವಿರೋಧವಿಲ್ಲ. ಸಂಘಟನೆಗಳು ಶಾಂತಿಯುತ ಪ್ರತಿಭಟನೆಗಳನ್ನು ಮಾಡಬೇಕು.ಆದರೆ ಕಾನೂನನ್ನು ಉಲ್ಲಂಘಿಸುವ ಕೆಲಸ ನಡೆದರೆ, ಅಂತಹವರ ವಿರುದ್ಧ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಂದು ಬಿಬಿಎಂಪಿ, ಪೊಲೀಸ್ ಇಲಾಖೆಗಳ ಜೊತೆ ಈ ವಿಷಯದ ಬಗ್ಗೆ ಸಭೆ ನಡೆಸಲಾಗುತ್ತದೆ. ಬೇರೆ ಭಾಷೆಯ ಬಗ್ಗೆ ವಿರೋಧವಿಲ್ಲವಾದರೂ, ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಿಎಂ ನುಡಿ :
ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ. ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು. ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ನ್ಯಾಸಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ.
ಇದಕ್ಕೂ ಮೊದಲು 2018 ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು. ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರತಕ್ಕದ್ದು.
ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ ಇದನ್ನು ಅನುಷ್ಠಾನಗೊಳಿಸಲಾಗುವುದು.ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.
ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ.
3-3-2022ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು. ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ. ರಾಜ್ಯದ ಹಿತದೃಷ್ಟಿಯಿಂದ ಶಾಂತಿಯುತ ಪ್ರತಿಭಟನೆ ಮಾಡಿದರೆ ನಾವು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಕ್ರಮ ಕೈಗೊಳ್ಳಲಿದೆ.
ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರಾದರೂ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡುತ್ತೇನೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ.
ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು.
*ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಅಂಗಡಿ ಮುಂಗಟ್ಟುಗಳು ವಾಣಿಜ್ಯ ಮಳಿಗೆಗಳಲ್ಲಿ ನಾಮಫಲಕಗಳನ್ನು ಅಳವಡಿಸುವ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಠಿಯ ಮುಖ್ಯಾಂಶಗಳು*
• ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ನ್ಯಾಸಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ.
• ಇದಕ್ಕೂ ಮೊದಲು 2018 ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು.
• ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರತಕ್ಕದ್ದು. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ.
• ಈ ಕಾಯ್ದೆ ಇಡೀ ರಾಜ್ಯಕ್ಕೆ ಅನ್ವಯಿಸುತ್ತದೆ.
• ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು. ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.
• ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ.
• 3-3-2022ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು. ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ.
ರಾಜ್ಯದ ಹಿತದೃಷ್ಟಿಯಿಂದ ಶಾಂತಿಯುತ ಪ್ರತಿಭಟನೆ ಮಾಡಿದರೆ ನಾವು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರಾದರೂ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡುತ್ತೇನೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಎಲ್ಲ ಸಂಘಟನೆಗಳು, ಹೋರಾಟಗಾರರಲ್ಲಿ ಕಾಯ್ದೆ ಜಾರಿ ಮಾಡುತ್ತೇವೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ನ್ನು ಜಾರಿಗೊಳಿಸಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು. ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ.
• ಎಲ್ಲ ಖಾಸಗಿ ಸಂಸ್ಥೆಯವರು ತಮ್ಮ ನಾಮಫಲಕವನ್ನು ಶೇ. 60:40ರ ಅನುಪಾತದಲ್ಲಿ ನಿಗದಿತ ಗಡುವಿನೊಳಗೇ ಅಳವಡಿಸಬೇಕು. ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ.