ಚಿಕ್ಕನಾಯಕನಹಳ್ಳಿ (ತುಮಕೂರು ಜಿಲ್ಲೆ):
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿಯ ವಡೇರಹಳ್ಳಿ ಗ್ರಾಮದಲ್ಲಿ ಮಂಗಳವಾರ ವಿದ್ಯುತ್ ಕಂಬದಿಂದ ಬಿದ್ದು ಲೈನ್ಮ್ಯಾನ್ ಹನುಮಂತ ಜಾಲಿಕಟ್ಟಿ (29) ಮೃತಪಟ್ಟಿದ್ದಾರೆ.
ವಿದ್ಯುತ್ ಕಂಬದ ಮೇಲೆ ದುರಸ್ತಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಕೆಳಗಡೆ ಬಿದ್ದಿದ್ದಾರೆ. ಹನುಮಂತ ಬೆಳಗಾವಿ ಜಿಲ್ಲೆಯ ಗೋಕಾಕನವರು.
ಕಂಬದ ಮೇಲೆ ಕೆಲಸ ಮಾಡುವ ಮೊದಲು ವಿದ್ಯುತ್ ಸಂಪರ್ಕ ಸರಿಯಾಗಿ ಕಡಿತಗೊಳಿಸಬೇಕು. ಬೆಸ್ಕಾಂ ಅಧಿಕಾರಿ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


