ಸಂಕೇಶ್ವರ :
ಸರಕಾರಿ ಶಾಲೆ ಮಕ್ಕಳಿಗೆ ತರಲಾದ ಕ್ಷೀರಭಾಗ್ಯ ಯೋಜನೆಯ ಹಾಲಿನಲ್ಲಿ ಹಲ್ಲಿ ಬಿದ್ದ ಘಟನೆ ಉಳ್ಳಾಗಡ್ಡಿ ಖಾನಾಪುರ ಗ್ರಾಮದಲ್ಲಿ ನಡೆದಿದೆ.
ಮಕ್ಕಳನ್ನು ಸಂಕೇಶ್ವರ ಸರಕಾರಿ ಹಾಗೂ ಇತರ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳಿಗೆ ಹಾಲು ನೀಡಿದ ನಂತರ ಹಾಲಿನಲ್ಲಿ ಹಲ್ಲಿ ಬಿದ್ದಿರುವ ವಿಷಯ ಗೊತ್ತಾಗಿದೆ. ನಂತರ ಆಂಬುಲೆನ್ಸ್ ಗಳಲ್ಲಿ ಮಕ್ಕಳನ್ನು ಸಂಕೇಶ್ವರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಪಾಲಕರು ಗಾಬರಿಗೊಂಡು ಆಸ್ಪತ್ರೆಗೆ ಧಾವಿಸಿದ್ದಾರೆ.