ಬೆಳಗಾವಿ: ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ.
ಬೆಳಗಾವಿಯ ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಂ.ಎಸ್ . ಬಿರಾದಾರ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ಡಿಎಸ್ಪಿ ಜೆ. ರಘು ನೇತೃತ್ವದಲ್ಲಿ ದಾಳಿ ನಡೆದಿದೆ.
ನಗರದ ವಿಶ್ವೇಶ್ವರಯ್ಯ ನಗರ ಶ್ರದ್ಧಾ ಅಪಾರ್ಟಮೆಂಟ್ನಲ್ಲಿ ಇರುವ ಮನೆ ಹಾಗೂ ಖಾನಾಪುರ ಕಿತ್ತೂರು ತಾಲೂಕುಗಳಲ್ಲಿ ಇರುವ ಮನೆಗಳ ಮೇಲೆ ಅಕ್ರಮ ಆಸ್ತಿ ಸಂಪಾದನೆ ಆರೋಪದ ಅಡಿ ಲೋಕಾಯುಕ್ತರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಇತ್ತ ಗುಲಬರ್ಗಾ ಟೌನ್ ಪ್ಲ್ಯಾನ್ ಆಫಿಸರ್ ಅಪ್ಪಾಸಾಹೇಬ್ ಕಾಂಬಳೆ ಎಂಬುವವರ ಮನೆ ಮೇಲೂ ದಾಳಿ ಮಾಡಲಾಗಿದೆ.
ಬೆಳಗಾವಿ ನಗರದ ರಾಮತೀರ್ಥ ನಗರದ ನಿವಾಸ ಮತ್ತು ಇಲ್ಲಿನ ಆಟೋ ನಗರದ ಅವರ ಒಡೆತನದ್ದು ಎನ್ನಲಾದ ಕಾರ್ಖಾನೆ ಮೇಲೆ ದಾಳಿ ಮಾಡಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಬೆಳಂಬೆಳಿಗ್ಗೆ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ! ಶೋಧ.
