ಬೆಳಗಾವಿ : ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಮೂಡಲಗಿ ತಾಲೂಕಿನ ತಾಲೂಕಾ ಮಟ್ಟದ ಎಲ್ಲ ಅಧಿಕಾರಿಗಳ ಸಮಕ್ಷಮದಲ್ಲಿ ಸೆಪ್ಟೆಂಬರ್ 03, 2025 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲೆಯ ಮೂಡಲಗಿ ತಾಲೂಕಿನ ತಹಶೀಲ್ದಾರ ಕಛೇರಿ, ಸಭಾ ಭವನದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ.
ಸರ್ಕಾರಿ ಕಛೇರಿಯಲ್ಲಿನ ಅಧಿಕಾರಿಗಳು ಸಾರ್ವಜನಿಕರ ಅಧಿಕೃತ ಕೆಲಸಗಳನ್ನು ಮಾಡಿ ಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ದೂರು ನೀಡಬಹುದಾಗಿದೆ.
ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡುವಲ್ಲಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ/ಒತ್ತಾಯಿಸಿದಲ್ಲಿ ಅಥವಾ ಸರ್ಕಾರಿ ಅಧಿಕಾರಿಯ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಮಾಹಿತಿ ಇದ್ದಲ್ಲಿ, ಲೋಕಾಯುಕ್ತ ಅಧಿಕಾರಿಗಳೊಂದಿಗೆ ನೇರವಾಗಿ/ಗುಪ್ತವಾಗಿ ಮಾಹಿತಿ ನೀಡಿ, ಅರ್ಜಿ ಸಲ್ಲಿಸಲು ಇಚ್ಛಿಸುವವರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಹಾಜರಿರಬೇಕು.
ಸಾರ್ವಜನಿಕರು ಸದರಿ ಸಭೆಯ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 0831-2950756, 0831-2421922, ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೆಳಗಾವಿ, ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿದಿದ್ದಾರೆ.