ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ದೂರು ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 51ಕ್ಕೂ ಹೆಚ್ಚು ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಗ್ಗೆ ಶೋಧ ಕಾರ್ಯ ಕೈಗೊಂಡಿದ್ದಾರೆ. ಒಟ್ಟು ನೂರಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ತುಮಕೂರು, ಯಾದಗಿರಿ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರಿನಲ್ಲಿ ದಾಖಲಾಗಿದ್ದ ದೂರುಗಳ ಆಧಾರದ ಮೇಲೆ ಕಾರ್ಯಾಚರಣೆ ಕೈಗೊಂಡಿದ್ದಾರೆ.