ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 6 ರಂದು ಬೆಳಿಗ್ಗೆ ವಿಚಾರಣೆಗೆ ಹಾಜರಾಗುವಂತೆ ವಿಚಾರಣೆಗೆ ಹಾಜರಾಗುವಂತೆ ಪ್ರಕರಣದ ಎ1 ಆರೋಪಿಯಾಗಿರುವ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣ ಸಂಬಂಧ ಈಗಾಗಲೇ ಎ2 ಪಾರ್ವತಿ ಸಿದ್ದರಾಮಯ್ಯ , ಎ3 ಮಲ್ಲಿಕಾರ್ಜುನ, ಎ4 ದೇವರಾಜು ಸೇರಿ ಹಲವರನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯನವರ 40 ವರ್ಷದ ಇತಿಹಾಸದಲ್ಲಿ ಈವರೆಗೆ ತನ್ನ ವೈಯಕ್ತಿಕ ಪ್ರಕರಣದಲ್ಲಿ ವಿಚಾರಣಾ ಸಂಸ್ಥೆಗಳಿಂದ ನೋಟಿಸ್ ಸ್ವೀಕರಿಸಿರಲಿಲ್ಲ. ಆದರೆ ಈಗ ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಇದೇ ಮೊದಲ ಬಾರಿಗೆ ತನಿಖಾ ಸಂಸ್ಥೆ (ಲೋಕಾಯುಕ್ತ) ಮುಂದೆ ವಿಚಾರಣೆಗೆ ಹಾಜರಾಗಬೇಕಾಗಿದೆ.