ಬೆಳಗಾವಿ :
ಕಾಂಗ್ರೆಸ್ ಪಕ್ಷದ ನಾಯಕಿಯರಾದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕರ್ನಾಟಕಕ್ಕೆ ಆಗಮಿಸುತ್ತಿರುವ ಬಗ್ಗೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ವಾಗ್ದಾಳಿ ನಡೆಸಿದ್ದಾರೆ.
ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಅವರು ಕಾಲಿಟ್ಟಲ್ಲೆಲ್ಲ ಕಮಲ ಅರಳುತ್ತದೆ. ಅವರನ್ನು ಸ್ವಾಗತಿಸುತ್ತೇನೆ. ದೇಶದಲ್ಲಿ ಕಾಂಗ್ರೆಸ್ ಹಿಡಿತ ಕಳೆದುಕೊಂಡಿದೆ. ಇದು ಭಾರತ್ ಜೋಡೋ ಅಲ್ಲ. ಕಾಂಗ್ರೆಸ್ನ ಸಿದ್ದರಾಮಯ್ಯ, ಮತ್ತು ಡಿ.ಕೆ. ಶಿವಕುಮಾರ್ ಜೋಡೋ ಕಾರ್ಯಕ್ರಮ ಎಂದು ಎಂದಿನಂತೆ ಲೇವಡಿ ಮಾಡಿದ್ದಾರೆ.