ಬೆಳಗಾವಿ : ತಾನು ಓಡಿಸುತ್ತಿದ್ದ ಆಟೋದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಮುನವಳ್ಳಿಯ ರಾಘವೇಂದ್ರ ಜಾಧವ
(28)ಮತ್ತು ರಂಜಿತಾ ಚೋಬಾರಿ (26) ಎಂದು ಗುರುತಿಸಲಾಗಿದೆ.
ಇವರು ಪ್ರೇಮಿಗಳು. ಹಲವು ವರ್ಷಗಳಿಂದ ಪ್ರೇಮಿಸುತ್ತಿದ್ದರು. ಆದರೆ ಇವರ ವಿವಾಹಕ್ಕೆ ಮನೆಯವರು ಒಪ್ಪಿಗೆ ನೀಡಿರಲಲ್ಲ. ಈ ನಡುವೆ ಇತ್ತೀಚಿಗೆ ರಂಜಿತಾಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥ ನಡೆದಿತ್ತು. ಇದರಿಂದ ಬೇಸರಗೊಂಡ ಇಬ್ಬರು ಆಟೋದಲ್ಲಿ ಬಂದು ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.