ಬೈಲಹೊಂಗಲ- ಪಾರಾದರ್ಶಕ ಆಡಳಿತದ ಮೂಲಕ ಎರಡನೇ ಬಾರಿ ರಾಜ್ಯದ ಚುಕ್ಕಾಣಿ ಹಿಡಿದಿರುವ ಸಿಎಂ ಸಿದ್ದರಾಮಯ್ಯ ನವರ ವಿರುದ್ಧ ತರಾತುರಿಯಲ್ಲಿ ಪ್ರಾಸಿಕ್ಯೂಶನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಖಂಡನೀಯವೆಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಪಟ್ಟಣದಲ್ಲಿ ತಮ್ಮ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ರಾಷ್ಟಪತಿ ಗಳಿಗೆ ಮನವಿ ಸಲ್ಲಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ರಾಜಕೀಯ ಷಡ್ಯಂತ್ರ ರೂಪಿಸಿ ಯಾವುದೇ ತಪ್ಪು ಮಾಡದೇ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯವರ ವಿರುದ್ಧ ಮುಡಾ ಪ್ರಕರಣದಲ್ಲಿ ಖಾಸಗಿ ವ್ಯಕ್ತಿಗಳಿಂದ ದೂರು ಸಲ್ಲಿಸಿ ರಾಜಭವನವನ್ನು ದುರುಪಯೋಗ ಮಾಡಿಕೊಂಡು
ಸಿಎಂ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವುದು ಖಂಡನೀಯ.
ರಾಜ್ಯಪಾಲರು ಸಂವಿಧಾನವನ್ನು ಎತ್ತಿ ಹಿಡಿಯುವ ಬದಲಾಗಿ ಸಂವಿಧಾನದ ಕಗ್ಗೊಲೆ ಮಾಡಲು ಮುಂದಾಗಿರುವುದು ಸರಿಯಲ್ಲ.
ಸಚಿವ ಸಂಪುಟದಲ್ಲಿನ 136 ಜನಪ್ರತಿನಿಧಿಗಳು ತೀರ್ಮಾನಿಸಿ ರವಾಣಿಸಿದ ಸಲಹೆಗಳಿಗೆ ಕಿಂಚಿತ್ತೂ ಬೆಲೆ ಕೊಡದೆ ಸಂವಿಧಾನ ಬಾಹಿರವಾಗಿ ಕಾರ್ಯ ನಿರ್ವಹಿಸಿದ್ದಾರೆ.
ಸಿದ್ದರಾಮಯ್ಯನವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದು ಗ್ಯಾರಂಟಿ ಗಳನ್ನು ಜಾರಿಗೆ ತರುವುದರ ಮೂಲಕ ರಾಜ್ಯದ ಜನತೆಯ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಸಿಎಂ ಅವರ ಜನಪ್ರಿಯತೆ ಸಹಿಸದ ವಿಪಕ್ಷಗಳು ರಾಜಭವನವನ್ನು ದುರುಪಯೋಗ ಮಾಡಿಕೊಂಡು ರಾಜ್ಯದಲ್ಲಿನ ಜನಪರ ಸರಕಾರವನ್ನು ಅಸ್ಥಿರಗೊಳಿಸಲು ಹೊರಟಿರುವುದು ಅಮಾನವೀಯ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಬದಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ,ಶಿವರುದ್ರಪ್ಪ ಹಟ್ಟಿಹೊಳಿ, ಶಂಕರಗೌಡ ಪಾಟೀಲ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ, ಕಾರ್ತಿಕ ಪಾಟೀಲ,ಜಿಲ್ಲಾ ಗ್ರಾಮೀಣ ಕಾರ್ಯದರ್ಶಿ ಉಮೇಶ ಬೊಳೆತ್ತಿನ, ತಾಲೂಕಾ ಗ್ಯಾರಂಟಿ ಸಮೀತಿ ಅದ್ಯಕ್ಷ, ಮಹಾಂತೇಶ ಕಳ್ಳಿಬಡ್ಡಿ, ತಾಲೂಕು ಕುರುಬರ ಸಂಘದ ಅಧ್ಯಕ್ಷ,ವಿಜಯಕುಮಾರ ದಳವಾಯಿ,ದಾದಾಪಿರ್ ಜಮಾದಾರ,ಜುನೆದ ಕಡಬಿ,ಪ್ರೀತಮ ಬೆಳಗಾವಿ,ಸಮಿ ಮಕಾನದಾರ, ಶ್ರೀಕಾಂತ ಸುಂಕದ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತಿದ್ದರು.