ವಿಜಯಪುರ :
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಬದಲಾವಣೆ ಮಾಡುವ ಪ್ರಶ್ನೆ ಇಲ್ಲ. ಅವರ ನೇತೃತ್ವದಲ್ಲೇ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಎದುರಿಸಲಿದ್ದೇವೆ ಎಂದು ಆ ರಾಜ್ಯದ ಉಪಮುಖ್ಯಮಂತ್ರಿ ದೇವೇಂದ್ರ
ಫಡ್ನವಿಸ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಗಡಿ ವಿಷಯ ಸುಪ್ರೀಂ ಕೋರ್ಟ್ ನಲ್ಲಿದೆ. ಬೆಳಗಾವಿಯಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನಕ್ಕೆ ನಾವು ವಿರೋಧ ಮಾಡಿಲ್ಲ. ಮಹಾರಾಷ್ಟ್ರ ಬಿಜೆಪಿ ಎಂದಿಗೂ ಎಂಇಎಸ್ ಅನ್ನು ಬೆಂಬಲಿಸಿಲ್ಲ. ಮಹಾರಾಷ್ಟ್ರ ಸರ್ಕಾರ ಜಾರಿಗೆ ತಂದಿರುವ ವಿಮಾವನ್ನು ನಾವು ಅನುಷ್ಠಾನಗೊಳಿಸಿದ್ದರೂ ಅದನ್ನು ರೂಪಿಸಿದ್ದು ಕಾಂಗ್ರೆಸ್ ಎಂದು ಹೇಳಿದರು.