ಮುಂಬೈ: ದೇವೇಂದ್ರ ಫಡ್ನವಿಸ್ ಅವರ ನೇತೃತ್ವದಲ್ಲಿ ಮಹಾಯುತಿ ಸರಕಾರ ಇಂದು ಸಂಜೆ ಐದು ಮೂವತ್ತಕ್ಕೆ ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ. ಏಕನಾಥ ಶಿಂದೆ ಮತ್ತು ಅಜಿತ್ ಪವಾರ ನೂತನ ಉಪಮುಖ್ಯಮಂತ್ರಿಗಳಾಗಲಿದ್ದಾರೆ.
ಶಿವಸೇನಾ ಅಧ್ಯಕ್ಷ ಏಕನಾಥ ಶಿಂದೆ ಅವರೇ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ನಾಯಕ ಉದಯ ಸಮಂತ್ ಘೋಷಿಸಿದ್ದಾರೆ.
ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಅವರು ಮುಖ್ಯಮಂತ್ರಿಯಾಗಿ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ ಶಿಂದೆ ಮತ್ತು ಎನ್ಸಿಪಿ ನಾಯಕ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಾಜರಿರಲಿದ್ದಾರೆ ಎಂದು ಉದಯ ಅವರು ಹೇಳಿದ್ದಾರೆ.
ಈ ಹಿಂದಿನ ಮಹಾಯುತಿ ಸರ್ಕಾರದಲ್ಲಿ ಶಿಂದೆ ಅವರು ಮುಖ್ಯಮಂತ್ರಿಯಾಗಿದ್ದ ಕಾರಣ ಈಗ ಬಿಜೆಪಿಗೆ ಅಧಿಕಾರ ನೀಡಲು ಇಚ್ಚಿಸುವುದಿಲ್ಲ ಎನ್ನಲಾಗಿತ್ತು. ಆದರೆ ಈಗ ಶಿಂದೆ ಉಪಮುಖ್ಯಮಂತ್ರಿಯಾಗಲು ಒಪ್ಪಿಕೊಂಡಿದ್ದಾರೆ.
ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡಣವೀಸ್ ಅವರು ಪ್ರಮಾಣವಚನ ಸ್ವೀಕರಿಸಿದರು. ಶಿವಸೇನಾ ನಾಯಕ ಏಕನಾಥ ಶಿಂದೆ ಮತ್ತು ಎನ್ಸಿಪಿಯ ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಆ ಮೂಲಕ ಮಹಾಯುತಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಧಾನಿ ನರೇಂದ್ರ ಮೋದಿ, ಹಲವು ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಬಾಲಿವುಡ್ ತಾರೆಯರು, ಉದ್ಯಮಿಗಳು ಹಾಗೂ ಬಿಜೆಪಿ ನೇತೃತ್ವದ ಮಹಾಯುತಿ ಕೂಟ ಸಾವಿರಾರು ಬೆಂಬಲಿಗರು ಪಾಲ್ಗೊಂಡಿದ್ದರು.
ಫಡಣವೀಸ್ ಸಂಪುಟಕ್ಕೆ ಸೇರಲಿರುವ ಇತರ ಸಚಿವರು ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೂ ಪೂರ್ವದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
ಇಲ್ಲಿನ ಅಜಾದ್ ಮೈದಾನದಲ್ಲಿ ಗುರುವಾರ ಸಂಜೆ ನಡೆದ ಅದ್ದೂರಿ ಸಮಾರಂಭದಲ್ಲಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಐದು ವರ್ಷಗಳ ನಂತರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಮರಳಿದ ಹಿನ್ನೆಲೆಯಲ್ಲಿ ಆಜಾದ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ಬಾಲಿವುಡ್ ನ ಗಣ್ಯಾತಿಗಣ್ಯರು ಭಾಗವಹಿಸಿದ್ದರು.
ಫಡ್ನವೀಸ್ ಅವರ ಮಹಾಯುತಿ ಮಿತ್ರ ಪಕ್ಷ ಶಿವಸೇನೆಯ ಏಕನಾಥ್ ಶಿಂಧೆ ಮತ್ತು ಎನ್ಸಿಪಿಯ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದು ಈ ಸಲದ ವಿಶೇಷತೆ.
ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಜೆಪಿ ನಡ್ಡಾ ಮತ್ತು ಇತರ ಬಿಜೆಪಿ ನಾಯಕರು, ಬಾಲಿವುಡ್ ನ ಹಲವು ನಟರು ಸಮಾರಂಭದಲ್ಲಿ ಭಾಗಿಯಾಗಿದ್ದರು.
ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ರಣಬೀರ್ ಕಪೂರ್ ಸೇರಿದಂತೆ ಬಾಲಿವುಡ್ ಸ್ಟಾರ್ ಗಳು ಭಾಗವಹಿಸಿದ್ದರು. ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ, ಅನಿಲ್ ಅಂಬಾನಿ, ಅನಂತ್ ಅಂಬಾನಿ ಮತ್ತು ಕುಮಾರ್ ಮಂಗಳಂ ಬಿರ್ಲಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಮೂರನೇ ಸಲ ಮುಖ್ಯಮಂತ್ರಿ ಹುದ್ದೆಗೇರಿದ ಕಟ್ಟಾ ಆರ್ ಎಸ್ ಎಸ್ ನಾಯಕ:
ಬಿಜೆಪಿಯ ಹಿರಿಯ ನಾಯಕ ಹಾಗೂ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿರುವ ದೇವೇಂದ್ರ ಫಡ್ನವಿಸ್ ಅವರು ಈಗ ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿ.
54 ವರ್ಷ ವಯಸ್ಸಿನ ದೇವೇಂದ್ರ ಫಡ್ನವಿಸ್ ಈ ಹಿಂದೆ ಎರಡು ಸಲ ಮಹಾರಾಷ್ಟ್ರದ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸಿದ್ದರು. ಇದೀಗ ಅವರು ಮತ್ತೊಂದು ಬಾರಿಗೆ ಮುಖ್ಯಮಂತ್ರಿ. ಈ ಹಿಂದೆ ಮುಖ್ಯಮಂತ್ರಿ ಆಗಿ ಕಾರ್ಯ ನಿರ್ವಹಿಸಿದ್ದ ಏಕನಾಥ ಶಿಂದೆ ಮತ್ತು ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಅಜಿತ್ ಪವಾರ್ ಅವರು ದೇವೇಂದ್ರ ಪಡ್ನವಿಸ್ ಅವರ ಸಚಿವ ಸಂಪುಟದಲ್ಲಿ ಹೊಸದಾಗಿ ಉಪಮುಖ್ಯಮಂತ್ರಿಯಾಗುತ್ತಿರುವುದು ವಿಶೇಷ.
ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಗೆಲುವು ದಾಖಲಿಸಿದೆ.
ನಾಗ್ಪುರ ನೈರುತ್ಯ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದೇವೇಂದ್ರ ಫಡಣವೀಸ್ ಆರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಹೆಜ್ಜೆ ಗುರುತುಗಳು…
1989ರಲ್ಲಿ 22ನೇ ವಯಸ್ಸಿಗೆ ನಾಗ್ಪುರ ನಗರ ಪಾಲಿಕೆಯ ಕಾರ್ಪೊರೇಟರ್ ಆಗಿ ಆಯ್ಕೆ
1997ರಲ್ಲಿ 27ನೇ ವಯಸ್ಸಿಗೆ ಕಿರಿಯ ಮೇಯರ್ ಆಗಿ ನೇಮಕ
1999-2004ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಗೆಲುವು ಸಾಧಿಸಿದರು. 2004-2009, 2009-2014, 2014-2019, 2019-2024ರವರೆಗೂ ಶಾಸಕರಾಗಿ ಐದು ಸಲ ಆಯ್ಕೆಯಾದರು. ಇದೀಗ ಮತ್ತೆ ಗೆಲುವು ದಾಖಲಿಸುವ ಮೂಲಕ 6ನೇ ಬಾರಿಗೆ ಶಾಸಕರಾಗಿದ್ದಾರೆ.
2014- 2019 ಮುಖ್ಯಮಂತ್ರಿಯಾಗಿದ್ದರು.
2019ರಿಂದ 2022ರವರೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದರು.
2022ರಿಂದ ಉಪಮುಖ್ಯಮಂತ್ರಿಯಾಗಿದ್ದಾರೆ.