ಬೆಳಗಾವಿ: ಬಿಜೆಪಿ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಶಾಸಕ ಸಂಜಯ ಪಾಟೀಲ ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಸಂಜಯ ಪಾಟೀಲ ಅವರ ಮನೆ ಎದುರು ಪ್ರತಿಭಟನೆ ನಡೆಸಿದರು.
ಆದರ್ಶ ನಗರದಲ್ಲಿರುವ ಸಂಜಯ ಪಾಟೀಲ ಮನೆ ಎದುರು ಜಮಾಯಿಸಿರುವ ನೂರಾರು ಮಹಿಳಾ ಕಾರ್ಯಕರ್ತೆಯರು ಸಂಜಯ ಪಾಟೀಲ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಸಂಜಯ ಪಾಟೀಲ ಹೊರಗೆ ಬಂದು ಕ್ಷಮೆ ಕೇಳುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಕುಳಿತಿದ್ದಾರೆ.
ಸಂಜಯ ಪಾಟೀಲ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.