ಬೆಳಗಾವಿ : ಅತಿವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಪ್ರಯಾಣಿಕರು ಸಾವನ್ನಪ್ಪಿದ್ದು, ಚಾಲಕ ಗಾಯಗೊಂಡಿರುವ ಘಟನೆ ನಡೆದಿದೆ.
ಆಟೋರಿಕ್ಷಾ ಅಪಘಾತದಲ್ಲಿ ಮೃತಪಟ್ಟವರನ್ನು ಮೀರಾ ಸಾಬ್ (30 ವರ್ಷ, ಗುಜರಾತ್ ನಿವಾಸಿ) ಎಂದು ಗುರುತಿಸಲಾಗಿದೆ. ಅಪಘಾತದ ಕಾರು ಚಾಲಕ ಹುಬ್ಬಳ್ಳಿಯ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ನಗರದ ಛತ್ರಪತಿ ಶಿವಾಜಿ ಮಹಾರಾಜ್ ಮೇಲ್ಸೇತುವೆಯಲ್ಲಿ ನಿನ್ನೆ ಮಧ್ಯರಾತ್ರಿ 12:30 ರ ಸುಮಾರಿಗೆ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಇದರಿಂದ ಆಟೋ ರಿಕ್ಷಾದಲ್ಲಿದ್ದ ಪ್ರಯಾಣಿಕರು ಸಾವನ್ನಪ್ಪಿದ್ದು, ರಿಕ್ಷಾ ಚಾಲಕನಿಗೆ ಗಾಯಗಳಾಗಿದ್ದು, ಕಾರಿಗೂ ಹಾನಿಯಾಗಿದೆ.
ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನು ಚಿಕಿತ್ಸೆಗಾಗಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.