ಬೆಳಗಾವಿ : ದಲಿತರನ್ನು ಇನ್ನು ಮೇಲ್ಮಟ್ಟದ ಜೀವನಕ್ಕೆ ತರಲು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಶ್ರಮಿಸಿದರು. ಅವರ ಹಾದಿಯಲ್ಲಿ ನಾವು ಸಾಗಬೇಕು ಎಂದು ಪ್ರಾಚಾರ್ಯ ಆರ್.ಎಸ್.ಪಾಟೀಲ ಹೇಳಿದರು.
ನಗರದ ಜಿ.ಎ.ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಲ್ಲಿ ಮಾತನಾಡಿ, ಅಂಬೇಡ್ಕರ್ ಅಪ್ರತಿಮ ಮೇಧಾವಿ. ದೇಶಕ್ಕೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ ಎಂದರು.
ಅಂಬೇಡ್ಕರ್ ಅವರ ವ್ಯಕ್ತಿತ್ವದ ಘಟನೆಗಳನ್ನು ನೋಡಬೇಕು. ಹಿಂದುಳಿದ, ತಳ ಸಮುದಾಯದ ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ಅವರು ಇಡೀ ಜೀವನವನ್ನೇ ಮುಡುಪಾಗಿರಿಸಿದ್ದರು ಎಂದರು.
ಕೆಎಲ್ ಇ ಸಂಸ್ಥೆಯ ಆಜೀವ ಸದಸ್ಯ ಮಹಾದೇವ ಬಳಿಗಾರ, ಉಪ ಪ್ರಾಚಾರ್ಯ ಸಿ.ಪಿ. ದೇವಋಷಿ ಹಾಜರಿದ್ದರು. ಪಾರ್ವತಿ ಚಿಮ್ಮಡ ನಿರೂಪಿಸಿದರು. ಕಾವೇರಿ ಪಟ್ಟಣ ವಂದಿಸಿದರು.