ಬೆಳಗಾವಿ :
ಕಳೆದ ಮಾರ್ಚ್ 2023 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಪ್ರಿಯಾಂಕಾ ಚಿದಂಬರ ಕುಲಕರ್ಣಿ ಲಿಂಗರಾಜ ಪದವಿಪೂರ್ವ ಕಾಲೇಜು ಬೆಳಗಾವಿ ಹಾಗೂ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದ ಸಹನಾ ಉಳವಪ್ಪ ಕಡಕೋಳ ಸರಕಾರಿ ಪದವಿ ಪೂರ್ವ ಕಾಲೇಜು ಬೈಲಹೊಂಗಲ ಇವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸನ್ಮಾನಿಸಿದರು.
ಬೆಳಗಾವಿಯಲ್ಲಿ ನಡೆದ ಸಮಾರಂಭದಲ್ಲಿ
ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.