ಬೆಳಗಾವಿ : ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 9 ರಿಂದ ಆರಂಭವಾಗಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದ ಮೊದಲ ದಿನವೇ ಮಹಾಮೇಳಾವ್ ನಡೆಸಲು ಎಂಇಎಸ್ ಮುಂದಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿಯನ್ನು ಭೇಟಿಯಾಗಿರುವ ಎಂಇಎಸ್ ಮುಖಂಡರು ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಅಧಿವೇಶನಕ್ಕೆ ಪರ್ಯಾಯವಾಗಿ ಮಹಾಮೇಳಾವ್ ನಡೆಸುತ್ತೇವೆ. ಇದಕ್ಕೆ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು. ಎಂಇಎಸ್ ಕಾರ್ಯಾಧ್ಯಕ್ಷ ಮನೋಹರ ಕಿಣೇಕರ ಮಾತನಾಡಿ, ಕರ್ನಾಟಕ ಸರಕಾರದಿಂದ ಗಡಿಭಾಗದ ಮರಾಠಿ ಭಾಷಿಕರ ಮೇಲೆ ಅನ್ಯಾಯ ನಡೆಯುತ್ತಿದೆ. ಹೀಗಾಗಿ ಅಧಿವೇಶನದ ಆರಂಭದ ದಿನವೇ ಎಂಇಎಸ್ ಮಹಾಮೇಳಾವ್ ನಡೆಸುತ್ತಿದೆ. ಇದಕ್ಕೆ ಜಿಲ್ಲಾಡಳಿತ ಅನುಮತಿ ನೀಡಲಿ ಅಥವಾ ನೀಡದೆ ಇರಲಿ. ನಾವು ಮೇಳಾವ್ ನಡೆಸಿಯೇ ಸಿದ್ದ ಎಂದು ತಿಳಿಸಿದರು.