ಉಡುಪಿ : ಯುವ ಪ್ರೇಮಿಗಳಿಬ್ಬರು ಜತೆಯಾಗಿ ನೇಣಿಗೆ ಶರಣಾಗಿರುವ ಘಟನೆ ಅಂಬಲಪಾಡಿಯ ಕಾಳಿಕಾಂಬ ನಗರದ ವಲಸೆ ಕಾರ್ಮಿಕರ ಕಾಲೋನಿಯಲ್ಲಿ ಗುರುವಾರ(ಅ16) ಸಂಜೆ ನಡೆದಿದೆ.
ವಲಸೆ ಕಾರ್ಮಿಕ ಕುಟುಂಬದ ವಿದ್ಯಾರ್ಥಿನಿ ಪವಿತ್ರಾ (17) ಮತ್ತು ವಲಸೆ ಕಾರ್ಮಿಕನಾಗಿದ್ದ ಮಲ್ಲೇಶ್ (23) ಬಾಡಿಗೆ ಗುಡಿಸಲಿನಲ್ಲಿ ಯಾರೂ ಇಲ್ಲದ ಸಮಯದಲ್ಲಿ ಚೂಡಿದಾರದ ಶಾಲು ಬಳಸಿಕೊಂಡು ನೇಣು ಬಿಗಿದುಕೊಂಡಿದ್ದಾರೆ. ಕಠಿನ ನಿರ್ಧಾರ ತಳೆಯಲು ಕಾರಣವೇನೆಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.
ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಜಿಲ್ಲಾಸ್ಪತೆಗೆ ಸಾಗಿಸಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಹಕಾರ ನೀಡಿದರು. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.