ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದರು.
ಇದೀಗ, ಸಂಸರಾದ ಬಳಿಕ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.
ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಇಂದು (ಶನಿವಾರ ಜೂ.15) ಬೆಳಗ್ಗೆ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದರು. ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ ಅವರು. ವಿಧಾನಸೌಧಕ್ಕೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.