ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆಯಂತೆ ಅವರ ಆಪ್ತ ಸಹಾಯಕ ಮಹಾಂತೇಶ ಹಿರೇಮಠ ಅವರು ಖಾಸಗಿ ಹಣಕಾಸು ಸಂಸ್ಥೆಯವರ ಜೊತೆ ಮಾತನಾಡಿ ಮನೆಯ ಬೀಗ ತೆಗೆಸಿ ಬಾಣಂತಿ ಹಾಗೂ ಕುಟುಂಬವನ್ನು ಮನೆಯೊಳಗೆ ಸೇರಿಸುತ್ತಿದ್ದಾರೆ.
ಜೊತೆಗೆ ಅವರಿಗೆ ದಿನಸಿ ಮತ್ತು ಆರ್ಥಿಕ ನೆರವನ್ನೂ ನೀಡಿದ್ದಾರೆ.
ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಬಾಣಂತಿ ಇರುವ ಬಡ ಕುಟುಂಬದ ಮನೆಯನ್ನು ಹರಾಜಿಗೆ ಇಟ್ಟು ಅವರನ್ನು ಮನೆಯಿಂದ ಹೊರಗೆ ಕಳಿಸಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.