ಬೆಳಗಾವಿ:
ಬೆಳಗಾವಿಯ ಕುವೆಂಪು ನಗರ ಹಾಗೂ ಸಹ್ಯಾದ್ರಿ ನಗರಗಳಿಗೆ ಹೊಂದಿಕೊಂಡಿರುವ ಶ್ರೀ ಸಾಯಿ ಕಾಲೋನಿಯ ನಾಮಪಲಕವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಉದ್ಘಾಟಿಸಿದರು.
ಈ ಸಮಯದಲ್ಲಿ ಸ್ಥಳೀಯ ನಿವಾಸಿಗಳು, ಮಹಿಳಾ ಸಂಘದ ಪದಾಧಿಕಾರಿಗಳು, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಉಪಸ್ಥಿತರಿದ್ದರು.
ಮಹಾಲಕ್ಷ್ಮಿಯ ದರ್ಶನ ಪಡೆದ ಲಕ್ಷ್ಮೀ ಹೆಬ್ಬಾಳಕರ್ :
ಸುಕ್ಷೇತ್ರ ಸುಳೇಭಾವಿಯ ಶ್ರೀ ಮಹಾಲಕ್ಷ್ಮಿ ಮಂದಿರಕ್ಕೆ ಭಾನುವಾರ ತೆರಳಿ, ದೇವಿಯ ದರ್ಶನ ಪಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್,
ನಾಡಿನ ಜನತೆಗೆ ನೆಮ್ಮದಿ, ಸುಭಿಕ್ಷೆ ನೀಡುವಂತೆ ಪ್ರಾರ್ಥಿಸಿದರು. ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಇದ್ದರು.