ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಕೂಡಲೇ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಜನರು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಕುಡಿಯುವ ನೀರಿನ ಪೂರೈಕೆ, ಮಂದಿರ ನಿರ್ಮಾಣಕ್ಕೆ ಹಣಕಾಸಿನ ಸಹಾಯ, ಸಿಸಿ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ, ವಿವಿಧ ಶಾಲೆಗಳ ಎಸ್.ಡಿ.ಎಂ.ಸಿ ಪದಾಧಿಕಾರಿಗಳು ತಮ್ಮ ಶಾಲೆಗೆ ಬೇಕಾದ ಸೌಲಭ್ಯ ಕುರಿತು ಮನವಿ ಸಲ್ಲಿಕೆ, ವಿದ್ಯುತ್ ಸಂಪರ್ಕ ತಾಲ್ಲೂಕು ಪಂಚಾಯ್ತಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಸಿದರು.
ಸಮಸ್ಯೆ ಆಲಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರು ಶೀಘ್ರವೇ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆ ಮೇಲಾಧಿಕಾರಿಗಳಿಗೆ ಫೋನ್ ಕರೆ ಮೂಲಕ ತಿಳಿಸಿ, ಸಮಸ್ಯೆ ಬಗೆಹರಿಸಲು ಸೂಚಿಸಿದರು.
ಈ ವೇಳೆ ಕಾಂಗ್ರೆಸ್ ಜಿಲಾಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷಣರಾವ್ ಚಿಂಗಳೆ, ಪ್ರದಾನ ಕಾರ್ಯದರ್ಶಿ ಪ್ರದೀಪ ಎಂ.ಜೆ, ಕಾಂಗ್ರೆಸ್ ಮುಖಂಡ ಸುನೀಲ ಹನಮಣ್ಣವರ, ಸಚಿವರ ಆಪ್ತ ಸಹಾಯಕ ಮಲಗೌಡಾ ಪಾಟೀಲ, ಕಾಂಗ್ರೆಸ್ ಮುಖಂಡ ಸೈಯದ್ ಮನಸೂರ ಸೇರಿದಂತೆ ಇತರರು ಇದ್ದರು.