ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ಚಾಮರಾಜನಗರ, ಹಾಸನ,ಬೀದರ್,ಕೊಪ್ಪಳ,ಹಾವೇರಿ,ಕೊಡಗು ಮತ್ತು ಬಾಗಲಕೋಟೆ ವಿವಿಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಉನ್ನತ ಶಿಕ್ಷಣ ಡಾ. ಎಂ.ಸಿ. ಸುಧಾಕರ್ ತಿಳಿಸಿದರು.
ಅವರು ಇಂದು ವಿಧಾನಪರಿಷತ್ನಲ್ಲಿ ಸದಸ್ಯ ಗೋವಿಂದರಾಜು ಮತ್ತು ಕೆ.ಎ.ತಿಪ್ಪೇಸ್ವಾಮಿ ಹಾಗೂ ಸೂರಜ್ ರೇವಣ್ಣ ಅವರ, ಪ್ರಾದೇಶಿಕ ಅಸಮತೋಲನ ನಿರ್ಮೂಲನೆ ಮಾಡುವ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣದ ಮೂಲಕ ವಾರ್ಷಿಕ ನೊಂದಣಿ ಅನುಪಾತವನ್ನು ಸುಧಾರಿಸುವ ನಿಟ್ಟಿನಲ್ಲಿ ಸ್ಥಾಪಿತವಾಗಿರುವ ವಿಶ್ವವಿದ್ಯಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಕೊರತೆಯನ್ನು ನೀಗಿಸುವ ಕುರಿತ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿ ಮಾತನಾಡಿದರು.
2022-23ನೆ ಸಾಲಿನ ಆಯವ್ಯಯ ಘೋಷಣೆಯನ್ವಯ ಹೆಚ್ಚುವರಿ ಮಾನವ ಸಂಪನ್ಮೂಲ ಉಪಯೋಗಿಸದೆ ಕಾರ್ಯನಿರ್ವಹಿಸಲಿರುವ ಸ್ನಾತಕೋತ್ತರ ಕೇಂದ್ರಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸುವ ಪ್ರಸ್ತಾಪಿತ ನೂತನ ವಿವಿಗಳಿಗೆ ಹಂಚಿಕೆಯಾದ ವಾರ್ಷಿ 2 ಕೋಟಿ ರೂ ಆವರ್ತಕ ವೆಚ್ಚದಲ್ಲಿ ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ನೂತನವಾಗಿ ಸೃಜಿಸಲಾದ ಚಾಮರಾಜನಗರ, ಹಾಸನ,ಬೀದರ್,ಕೊಪ್ಪಳ,ಹಾವೇರಿ,ಕೊಡಗು ಮತ್ತು ಬಾಗಲಕೋಟೆ ವಿವಿಗಳಿಗೆ ವೇತನ ಪಾವತಿಗಾಗಿ ತಲಾ ರೂ 1 ಕೋಟಿ ರೂ.ಗಳಂತೆ 7 ಕೋಟಿ ರೂ.ಗಳನ್ನು ಪುನರ್ವಿನಿಯೋಗದ ಮೂಲಕ ಬಿಡುಗಡೆಗೊಳಿಸಿ ಆದೇಶಿಸಿದೆ.
ಪ್ರಸ್ತಾಪಿತ ನೂತನ ವಿವಿಗಳಿಗೆ ಮಾತೃ ವಿವಿಗಳಿಂದ ವರ್ಗಾವಣೆ ಮಾಡಿರುವ ಬೋಧಕ-ಬೋಧಕೇತರ ಹುದ್ದೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 58 ರನ್ವಯ ಕ್ರಮವಹಿಸುವ ಕುರಿತು ಅವಕಾಶವನ್ನು ಕಲ್ಪಿಸಲಾಗಿದ್ದು, ಅದರನ್ವಯ ಸರ್ಕಾರದ ಹಂತದಲ್ಲಿ ನೂತನ ವಿವಿಗಳಿಗೆ ಪ್ರಸ್ತಾಪಿತ ಬೋಧಕ-ಬೋಧಕೇತರ ಸೇವಾ ಭದ್ರತೆಗೆ ಸಂಬಂಧಿಸಿದಂತೆ ನಿರ್ದೇಶನ ನೀಡಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಈ ಹೊಸ ವಿವಿಗಳ ಮೂಲಭೂತ ಸೌಕರ್ಯಗಳ ಕೊರತೆಯನ್ನು ನೀಗಿಸುವ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸ್ಪಷ್ಟ ನಿಲುವು ಪ್ರಕಟಿಸಲಾಗುವುದು ಎಂದರು.
ಪ್ರಾದೇಶಿಕ ಅಸಮತೋಲನ ನಿರ್ಮೂಲನೆ ಮಾಡುವ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣದ ಮೂಲಕ ವಾರ್ಷಿಕ ನೊಂದಣಿ ಅನುಪಾತವನ್ನು ಸುಧಾರಿಸುವ ನಿಟ್ಟಿನಲ್ಲಿ ಮಾದರಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿ ಅಲ್ಲಿನ ಸಮುದಾಯಕ್ಕೆ ಸವಕಾಶವನ್ನು ಸ್ಥಳೀಯವಾಗಿ ಕಲ್ಪಿಸಿ, ಯುವ ಜನಾಂಗವನ್ನು ದೇಶದ ಫಲಪ್ರದವಾಗಿ ಬೆಳೆಸಲು ಸಹಯೋಗ ನೀಡುವ ನಿಟ್ಟಿನಲ್ಲಿ ಈ ಹೊಸ ವಿವಿಗಳನ್ನು ಸ್ಥಾಪಿಸಲಾಗಿದ್ದು, ಹೀಗೆ ಸ್ಥಾಪಿತವಾಗಿರುವ ವಿವಿಗಳಲ್ಲಿ ಸಂಯೋಜಿತ ಕಾಲೇಜುಗಳ ಸಂಖ್ಯೆಯು ಹಳೆಯ ವಿವಿಗಳ ರೀತಿಯಲ್ಲಿ ಇಲ್ಲದೇ ಇರುವುದು, ಸ್ವಂತ ಕಟ್ಟಡ ಇಲ್ಲದೇ ಇರುವುದು ಹಾಗೂ ಖಾಯಂ ಸ್ವರೂಪದ ಬೋಧಕ-ಬೋಧಕೇತರ ಸಿಬ್ಬಂದಿ, ಆರ್ಥಿಕ ಮುಗ್ಗಟ್ಟು ಮತ್ತು ಸರ್ಕಾರದ ಅನುದಾನ ಇಲ್ಲದೇ ಇರುವುದು ಮುಂತಾದ ಹಲವಾರು ಸಮಸ್ಯೆಗಳಿಂದ ನೂತನ ವಿವಿಗಳು ಸೊರಗಿವೆ, ಹಲವು ವಿವಿಗಳು ಸ್ನಾತಕೋತ್ತರ ಕೇಂದ್ರಗಳ ಸ್ವರೂಪದಲ್ಲೇ ಕಾರ್ಯನಿರ್ವಹಿಸುತ್ತಿವೆ;ಅದರಲ್ಲೂ ಕಲ್ಯಾಣ ಕರ್ನಾಟಕ ಜನರ ಬೇಡಿಕೆ ಮತ್ತು ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ಪ್ರಾದೇಶಿಕ ಅಸಮತೋಲನವನ್ನು ನಿರ್ಮೂಲನೆ ಮಾಡುವ ಮತ್ತು ಜಿಲ್ಲೆಗಳ ಉನ್ನತ ಶಿಕ್ಷಣದ ವಾರ್ಷಿಕ ನೊಂದಣಿ ಅನುಪಾತವನ್ನು ಸುಧಾರಿಸುವ ನಿಟ್ಟಿನಲ್ಲಿ ತೆರೆದಿರುವ ಜಿಲ್ಲಾ ಮಟ್ಟದಲ್ಲಿರುವ ವಿವಿಗಳು ಇನ್ನೂ ಟೇಕಾಫ್ ಆಗಿಲ್ಲ ಎಂಬ ವಿಷಯದ ಕುರಿತಂತೆ ಸದಸ್ಯ ಗೋವಿಂದರಾಜು ಮತ್ತು ಕೆ.ಎ.ತಿಪ್ಪೇಸ್ವಾಮಿ ಹಾಗೂ ಸೂರಜ್ ರೇವಣ್ಣ ಅವರಿಗೆ ಪೂರಕವಾಗಿ ಸದಸ್ಯರಾದ ತಳವಾರ ಸಾಬಣ್ಣ, ರವಿಕುಮಾರ್, ಹನುಮಂತ ನಿರಾಣಿ ಮಾತನಾಡಿದರು.