ಬೆಳಗಾವಿ :
ನಾಡಿನ ಕಲೆ-ಸಂಸ್ಕೃತಿ ಉಳಿಸಿ ಬೆಳೆಸುವ ಉದ್ದೇಶವೇ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಯ ಗುರಿಯಾಗಿದೆ ಎಂದು ಶಾಸಕ ಅನಿಲ್ ಬೆನಕೆ ಹೇಳಿದರು.
2022-23 ನೇ ಶೈಕ್ಷಣಿಕ ವರ್ಷದ ತಾಲೂಕು ಮಟ್ಟ, ಬೆಳಗಾವಿ ನಗರ ವಲಯದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವವನ್ನು ನಗರದ
ಶ್ರೀಮತಿ ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ನಗರ ವಲಯ ಬೆಳಗಾವಿ ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯದ ವತಿಯಿಂದ
ಆಯೋಜಿಸಲಾಗಿದ್ದು ಈ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು.
ಇಂದಿನ ವಿದ್ಯಾರ್ಥಿಗಳು ಭಾರತ ದೇಶದ ಮುಂದಿನ ಪ್ರಜೆಗಳು. ಆದ್ದರಿಂದ ವಿದ್ಯಾರ್ಥಿ ಜೀವನದಲ್ಲಿಯೇ ಭಾರತೀಯ ಸಂಸ್ಕೃತಿ ಬಗ್ಗೆ ಅರಿವು ಮೂಡಿಸಿಕೊಂಡರೆ ನಮ್ಮತನವನ್ನು ಉಳಿಸಿಕೊಳ್ಳಲು ಸಾಧ್ಯ. ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ನಡೆಸಲಿರುವ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಿಂದ ಇದು ಸಾಧ್ಯವಾಗುತ್ತದೆ ಮತ್ತು ಮಕ್ಕಳು ಸರ್ವತೋಮುಖ ಅಭಿವೃದ್ದಿ ಹೊಂದುವರು. ಶಿಕ್ಷಕರು ಮಕ್ಕಳಲ್ಲಿಯ ಒಳ್ಳೆಯ ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಶಾಸಕರು ಹೇಳಿದರು.
ಕರ್ನಾಟಕ ರಾಜ್ಯ ಪ್ರಾರ್ಥಮಿಕ ಶಾಲಾ ಸಂಘ ಬೆಳಗಾವಿ ಜಯಕುಮಾರ ಹೆಬಳಿ , ಎಸಿ/ಎಸ್ ಟಿ ಸಂಘದ ರಾಜ್ಯ ಕಾರ್ಯದರ್ಶಿ ಭರತ ಬಳ್ಳಾರಿ, ಶಾಲೆಯ ಮುಖ್ಯೋಪಾಧ್ಯಾಯ ಎಂ.ಕೆ.ಮಾದರ ,
ಬಿ.ಸಿ.ಮುದಕನಗೌಡರ , ರಿಜವಾನ್ ನಾವಗೆಕರ, ನಗರ ವಲಯದ ಇಸಿಓ , ಬಿಆರ್ಪಿ ಹಾಗೂ ಸಿಆರ್ಪಿಗಳು,
ವಿವಿಧ ಶಾಲೆಯ ಶಿಕ್ಷಕರು ಸ್ಪರ್ಧಾಳುಗಳು ಉಪಸ್ಥಿತರಿದ್ದರು.
ಬೆಳಗಾವಿ ನಗರದ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕಲೆಯನ್ನು
ಪರಿಚಯಿಸಿದರು.
ಭಾಷಣ, ಧಾರ್ಮಿಕ ಪಠಣ, ಕಿರು ಸಂಗೀತ, ವೇಷಭೂಷಣ, ಕಥೆ ಹೇಳುವುದು, ಅಭಿನಯ ಗೀತೆ, ಚಿತ್ರಕಲೆ, ಭಕ್ತಿಗೀತೆ, ಭಾವಗೀತೆ, ಜಾನಪದ ಗೀತೆ, ಭರತ ನಾಟಕ, ಮಿಮಿಕ್ರಿ, ರಂಗೋಲಿ, ಗಜಲ್, ಹಾಸ್ಯ, ರಸಪ್ರಶ್ನೆ, ಕವಾಲಿ, ಸಮೂಹ ನೃತ್ಯ ಇತ್ಯಾದಿ ಸ್ಪರ್ಧೆಗಳಲ್ಲಿ ಮಕ್ಕಳು ಭಾಗವಹಿಸಿ ತಮ್ಮಲ್ಲಿರುವ ಕಲೆಯನ್ನು ಪ್ರದರ್ಶಿಸಿದರು . ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಜೆ. ಭಜಂತ್ರಿ ಸ್ವಾಗತಿಸಿದರು. ಕ್ಷೇತ್ರ ಸಮನ್ವಯ ಅಧಿಕಾರಿ ಐ.ಡಿ.ಹಿರೇಮಠ ವಂದಿಸಿದರು .