ಬೆಳಗಾವಿ : ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಖಾನಾಪುರ ಕ್ಷೇತ್ರದ ಶಾಸಕ ವಿಠ್ಠಲ ಎಸ್. ಹಲಗೇಕರ ಅವರು ಭೇಟಿ ಮಾಡಿ ಖಾನಾಪುರ ಕ್ಷೇತ್ರದ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಉಪಸ್ಥಿತರಿದ್ದರು.
ಖಾನಾಪುರ ತಾಲೂಕು ಅತ್ಯಂತ ಹಿಂದುಳಿದ ತಾಲೂಕುಗಳಲ್ಲಿ ಒಂದಾಗಿದ್ದು ಇಲ್ಲಿಯ ಶೈಕ್ಷಣಿಕ ಸಮಸ್ಯೆಗಳಿಗೆ ಸರಕಾರ ಸ್ಪಂದಿಸುವಂತೆ ಅವರು ಮನವಿ ಮಾಡಿದರು.