ಖಾನಾಪುರ : ಖಾನಾಪುರ ತಾಲೂಕಿನ ಗ್ರಾಮೀಣ ಭಾಗದ ಸಮಗ್ರ ಅಭಿವೃದ್ದಿಗೆ ಸದಾ ಬದ್ಧರಾಗಿರುವುದಾಗಿ ಶಾಸಕ ವಿಠ್ಠಲ ಹಲಗೇಕರ ತಿಳಿಸಿದರು.
ಮಾಡಿಗುಂಜಿ ಗ್ರಾಮದಲ್ಲಿ ಹೊಸ ಪಶುವೈದ್ಯಕೀಯ ಆಸ್ಪತ್ರೆಯ ಕಟ್ಟಡದ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಈ ಆಧುನಿಕ ಪಶುವೈದ್ಯಕೀಯ ದವಾಖಾನೆಯಿಂದ ಮಾಡಿಗುಂಜಿಯ ಜೊತೆಗೆ ಸುತ್ತಮುತ್ತಲಿನ ಅರಣ್ಯ ಪ್ರದೇಶದ ಗ್ರಾಮಗಳ ರೈತರಿಗೆ ತಮ್ಮ ಪಶುಗಳಿಗೆ ಸಮಯೋಚಿತ ಚಿಕಿತ್ಸೆ ಹಾಗೂ ಉತ್ತಮ ಆರೋಗ್ಯ ಸೇವೆಗಳು ಲಭ್ಯವಾಗಲಿವೆ. ರೈತರ ಹಿತಕ್ಕಾಗಿ ನಿರಂತರವಾಗಿ ಶ್ರಮಿಸುವುದಾಗಿ ತಿಳಿಸಿದರು. ತಾಲೂಕಿನ ಪಶುವೈದ್ಯಕೀಯ ಅಧಿಕಾರಿಗಳು, ಸ್ಥಳೀಯ ಗ್ರಾಮ ಪಂಚಾಯತ್ ಪದಾಧಿಕಾರಿಗಳು ಹಾಗೂ ಗ್ರಾಮದ ನಾಗರಿಕರು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದ ನೂತನ ಆಸ್ಪತ್ರೆಗೆ ಶಾಸಕ ವಿಠ್ಠಲ ಹಲಗೇಕರ ಭೂಮಿಪೂಜೆ


