ಖಾನಾಪುರ : ವೀರಭೂಮಿ ಎಂದೇ ಪ್ರಸಿದ್ಧಿಯಾದ ನಂದಗಡ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಶೌರ್ಯ, ತ್ಯಾಗ ಮತ್ತು ದೇಶಾಭಿಮಾನವನ್ನು ಮುಂದಿನ ತಲೆಮಾರಿಗೆ ಪರಿಚಯಿಸುವ ಉದ್ದೇಶದಿಂದ ವೀರಯೋಧ ಸಂಗೊಳ್ಳಿ ರಾಯಣ್ಣನವರ ವಸ್ತು ಸಂಗ್ರಹಾಲಯ ನಿರ್ಮಾಣ, ಭವ್ಯವಾದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಹಾಗೂ ಗ್ರಾಮದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಈ ಮಹತ್ವದ ಕಾರ್ಯಕ್ರಮಗಳ ಅಂಗವಾಗಿ, ಖಾನಾಪುರ ಮತಕ್ಷೇತ್ರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕ ವಿಠ್ಠಲ ಹಲಗೇಕರ ಅವರು, ಆತ್ಮೀಯವಾಗಿ ಹಾಗೂ ಸಾಂಪ್ರದಾಯಿಕ ರೀತಿಯಲ್ಲಿ ಭವ್ಯ ಸ್ವಾಗತಿಸಲಾಯಿತು.
ನಂದಗಡದ ಪವಿತ್ರ ಭೂಮಿಯಲ್ಲಿ ವೀರ ಸಂಗೊಳ್ಳಿ ರಾಯಣ್ಣನವರ ಸ್ಮರಣೆಯನ್ನು ಶಾಶ್ವತಗೊಳಿಸುವ ಈ ಯೋಜನೆಗಳು, ಕಿತ್ತೂರು ಕರ್ನಾಟಕ ಭಾಗದ ಇತಿಹಾಸ, ಸಂಸ್ಕೃತಿ ಹಾಗೂ ಜನರ ಸ್ವಾಭಿಮಾನವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಲಿವೆ ಎಂದು ಶಾಸಕರು ಹೇಳಿದರು.


