ನವದೆಹಲಿ :
ರಕ್ಷಾ ಬಂಧನ ಹಬ್ಬಕ್ಕೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನೀಡುತ್ತಿದೆ. ಆಗಸ್ಟ್ 30 ರಿಂದ 14 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮೂಲಗಳ ಪ್ರಕಾರ ಆಗಸ್ಟ್ 30 ರಿಂದ 200 ರೂಪಾಯಿ ಇಳಿಕೆಯಾಗಲಿದೆ. ಕೇಂದ್ರ ಕ್ಯಾಬಿನೆಟ್ ಸಿಲಿಂಡರ್ ಇಳಿಕೆಗೆ ಅನುಮತಿ ನೀಡಿದೆ. ನಾಳೆಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಸಿಎನ್ಬಿಸಿಟಿ ವರದಿ ಪ್ರಕಾರ ಅಡುಗೆ ಅನಿಲ ಬೆಲೆಯಲ್ಲಿ 200 ರೂಪಾಯಿ ಇಳಿಕೆಯಾಗಲಿದೆ ಎಂದಿದೆ.
ಸದ್ಯ 14.2 ಕೆಜಿ ಅಡುಗೆ ಗ್ಯಾಸ್ ಸಿಲಿಂಡರ್ ಬೆಲೆ ಕರ್ನಾಟಕದಲ್ಲಿ 1,105.50 ರೂಪಾಯಿ ಇದ್ದರೆ, ದೆಹಲಿಯಲ್ಲಿ 1053, ಮುಂಬೈನಲ್ಲಿ 1052.50 ರೂಪಾಯಿ, ಚೆನ್ನೈನಲ್ಲಿ 1079 ರೂಪಾಯಿ ದರವಿದೆ. ಈ ಬೆಲೆಯಲ್ಲಿ 200 ರೂಪಾಯಿ ಕಡಿತಗೊಳ್ಳಲಿದೆ ಎಂದು ವರದಿಯಾಗಿದೆ. ಜುಲೈ ತಿಂಗಳಲ್ಲಿ 50 ರೂಪಾಯಿ ಏರಿಕೆ ಕಂಡಿದ್ದರೆ, ಮೇ ತಿಂಗಳಲ್ಲಿ 2 ಸಲ ದರ ಏರಿಕೆಯಾಗಿತ್ತು.
ಛತ್ತೀಸಘಡ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಹಾಗೂ ಮಿಜೋರಾಂನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬಂದಿದೆ.