ದೆಹಲಿ:
ಜನಪ್ರಿಯ ಜಾಗತಿಕ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಮೊದಲ ಸ್ಥಾನವನ್ನು ಗಳಿಸಿಕೊಂಡಿದ್ದು, ಈ ಬಾರಿ ಶೇ.76ರಷ್ಟು ಅನುಮೋದನೆಯ ರೇಟಿಂಗ್ ಪಡೆದುಕೊಂಡಿದ್ದಾರೆ ಎಂದು ಮಾರ್ನಿಂಗ್ ಕನ್ಸಲ್ಟ್ನ ಸಮೀಕ್ಷೆ ತಿಳಿಸಿದೆ.
ಅಮೆರಿಕ ಮೂಲದ ಈ ಸಂಸ್ಥೆ ಪ್ರತಿ ತಿಂಗಳು ಸಮೀಕ್ಷೆ ನಡೆಸುತ್ತಿದ್ದು, ಜೂನ್ ತಿಂಗಳಲ್ಲೂ ಪ್ರಧಾನಿ ಮೋದಿ ಜನಪ್ರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶೇ.59ರಷ್ಟು ರೇಟಿಂಗ್ ಪಡೆದುಕೊಂಡಿರುವ ಮೆಕ್ಸಿಕೋ ಅಧ್ಯಕ್ಷ ಆ್ಯಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಓಬ್ರಡಾರ್ ಅವರು 2ನೇ ಹಾಗೂ ಶೇ.53ರಷ್ಟು ರೇಟಿಂಗ್ ಹೊಂದಿರುವ ಆಸ್ಪ್ರೇಲಿಯಾದ ಪ್ರಧಾನಿ ಅಂಥೋನಿ ಆಲ್ಬನೀಸ್ 3ನೇ ಸ್ಥಾನದಲ್ಲಿದ್ದಾರೆ. ಶೇ.40ರಷ್ಟು ರೇಟಿಂಗ್ ಪಡೆದುಕೊಂಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡೆನ್ 6ನೇ ಹಾಗೂ ಶೇ.32ರಷ್ಟುರೇಟಿಂಗ್ ಪಡೆದುಕೊಂಡಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ 9ನೇ ಸ್ಥಾನದಲ್ಲಿದ್ದಾರೆ.