ಬೆಂಗಳೂರು :
ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಶನಿವಾರ ಮತ್ತು ಭಾನುವಾರ ಎರಡು ದಿನ ರೋಡ್ ಶೊ ನಡೆಸಿ ಮತಯಾಚಿಸಲಿದ್ದಾರೆ ಎಂದು ತಿಳಿಸಲಾಗಿದೆ.
ಈಗಾಗಲೇ ರಾಜ್ಯದ ಹಲವೆಡೆ ಬೃಹತ್ ಸಮಾವೇಶ ಹಾಗೂ ರೋಡ್ ಶೊ ನಡೆಸಿ ಮೋದಿ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದಾರೆ. ಈಗ ಬೆಂಗಳೂರಿನಲ್ಲಿ ಮತಬೇಟೆ ನಡೆಸಲಿದ್ದಾರೆ.
ಈ ಮೊದಲು ಶನಿವಾರ ಬೆಳಿಗ್ಗೆ ಮತ್ತು ಸಂಜೆ ರೋಡ್ ಶೊ ನಡೆಸಲು ಮೋದಿ ನಿರ್ಧರಿಸಿದ್ದರು. ಕೆಲ ದಿನಗಳಿಂದ ನಗರದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ ರೊಡ್ ಶೋ ನಡೆಸಲು ಮುಂದಾಗಿದ್ದಾರೆ.
ಮೇ 6 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಮೇ 7 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ರೋಡ್ ಶೋ ನಡೆಸಲಿದ್ದಾರೆ ಎಂದು ಹೇಳಲಾಗಿದೆ.