ನವದೆಹಲಿ: ಗುಜರಾತ್ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ದ್ವಾರಕಾ ನಗರದಲ್ಲಿ ಅರಬ್ಬಿ ಸಮುದ್ರದ ಪಂಚಕುಯಿ ಕರಾವಳಿ ತೀರದ ಬಳಿ ಸ್ಕೂಬಾ ಡೈವಿಂಗ್ ಮಾಡಿದ್ದಾರೆ.
ಗುಜರಾತ್ನ ఓಖ್ ಮತ್ತು ಬೆಟ್ ಸಂಪರ್ಕಿಸುವ ಸೇತುವೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ಈ ಸೇತುವೆ ದೇಶದಲ್ಲೇ ಅತಿ ಉದ್ದದ ಕೇಬಲ್ ಸೇತುವೆ ಎಂದು ಹೇಳಲಾಗುತ್ತದೆ. ಈ ಸೇತುವೆಗೆ ಸುದರ್ಶನ ಸೇತು ಎಂದು ಹೆಸರಿಡಲಾಗಿದೆ. ಸುದರ್ಶನ ಸೇತುವನ್ನು ಉದ್ಘಾಟಿಸಿದ ನಂತರ ಪ್ರಧಾನಿ ಸೇತುವೆಯ ಸುತ್ತಲೂ ಓಡಾಡಿ ವೀಕ್ಷಣೆ ಮಾಡಿದ್ದಾರೆ.
ಸೇತುವೆ ಉದ್ಘಾಟನೆಗೂ ಮುನ್ನ ಮೋದಿ ಅವರು ದ್ವಾರಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಅರ್ಚಕರು ಪ್ರಧಾನಿಯವರಿಗೆ ಆತ್ಮೀಯವಾಗಿ ಸ್ವಾಗತಿಸಿ ತೀರ್ಥ ಪ್ರಸಾದ ನೀಡಿದರು. ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.
ಸ್ಕೂಬಾ ಡೈವಿಂಗ್ ಅನುಭವದ ಬಗ್ಗೆ, ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ‘ನೀರಿನಲ್ಲಿ ಮುಳುಗಿರುವ ದ್ವಾರಕಾ ನಗರದಲ್ಲಿ ಪ್ರಾರ್ಥನೆ ಮಾಡುವುದು ಅತ್ಯಂತ ದಿವ್ಯವಾದ ಅನುಭವವಾಗಿತ್ತು. ನಾನು ಆಧ್ಯಾತ್ಮಿಕ ಭವ್ಯತೆ ಮತ್ತು ಪ್ರಾಚೀನ ಯುಗಕ್ಕೆ ಹೋದಂತೆ ಭಾಸವಾಯಿತು. ಭಗವಾನ್ ಶ್ರೀ ಕೃಷ್ಣ ನಮ್ಮೆಲ್ಲರನ್ನು ಆಶೀರ್ವದಿಸಲಿ’ ಎಂದು ಬರೆದುಕೊಂಡಿದ್ದಾರೆ.
ಸುದರ್ಶನ ಸೇತುವಿನ ಉದ್ದ 2.32 ಕಿಲೋಮೀಟರ್. 2.979 ಕೋಟಿಯಲ್ಲಿ ಇದನ್ನು ಸಿದ್ಧಪಡಿಸಲಾಗಿದೆ. ಇದು ದೇಶದ ಪ್ರಮುಖ ಮೂಲಸೌಕರ್ಯ ಯೋಜನೆಗಳಲ್ಲಿ ಒಂದಾಗಿದೆ. ಪ್ರಧಾನಿ ಮೋದಿ ಸದ್ಯ ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿದ್ದಾರೆ.