ಬೆಂಗಳೂರು: ಮುಂಗಾರು ಮಾರುತಗಳು ಇಡೀ ರಾಜ್ಯವನ್ನು ಆವರಿಸಿಕೊಂಡ ಹಿನ್ನೆಲೆಯಲ್ಲಿ ಶನಿವಾರ (ಜೂನ್ 8) ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ ಉಡುಪಿ ಮತ್ತು ಉತ್ತರ ಒಳನಾಡಿನ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಶನಿವಾರ ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗುಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ದಕ್ಷಿಣ ಕನ್ನಡ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗಾಳಿ ಮಳೆಯಾಗಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಬೀದರ, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.