ಬೆಳಗಾವಿ: ನರೇಗಾ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರಕ್ ಪಲ್ಟಿಯಾಗಿ 25 ಕ್ಕೂ ಅಧಿಕ ಕೆಲಸಗಾರರು ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.
ಯಮಕನಮರಡಿ ಗ್ರಾಮದಿಂದ ಹಿಡಕಲ್ ಡ್ಯಾಮ್ಗೆ ನರೇಗಾ ಕೆಲಸಕ್ಕೆ ಕೂಲಿ ಕಾರ್ಮಿಕರು ಟ್ರಕ್ನಲ್ಲಿ ಹೊರಟಿದ್ದರು. ಈ ವೇಳೆ ಅಡ್ಡ ಬಂದ ಬುಲೆಟ್ ವಾಹನವನ್ನು ತಪ್ಪಿಸಲು ಹೋಗಿ ಬುಲೆಟ್ಗೆ ಡಿಕ್ಕಿ ಹೊಡೆದು ಟ್ರಕ್ ಗಾಡಿಯ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ 25 ಕ್ಕೂ ಅಧಿಕ ಜನ ಕಾರ್ಮಿಕರು ಗಾಯಗೊಂಡಿದ್ದಾರೆ. 29 ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರೆ, ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ. ಸಣ್ಣಪುಟ್ಟ ಗಾಯವಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.